ಕೊಪ್ಪಳ ಸೆ. ೨೧
(ಕ ವಾ) ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೆ. ೨೭ ರಂದು ಶಿಕ್ಷಕರ
ಅರ್ಹತಾ ಪರೀಕ್ಷೆ (ಟಿಇಟಿ) ಕೊಪ್ಪಳ ಹಾಗೂ ಗಂಗಾವತಿಯ ಒಟ್ಟು ೨೧ ಪರೀಕ್ಷಾ
ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ
ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪ್ರಭಾರ
ಜಿಲ್ಲಾಧಿಕಾರಿ ಡಾ. ಪ್ರವೀಣ್‌ಕುಮಾರ್ ಜಿ.ಎಲ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಪೂರ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸೆ. ೨೭ ರಂದು ಜಿಲ್ಲೆಯ ೨೧ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಏರ್ಪಡಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಾಹ ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ದಿನದಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಎಸ್‌ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

0 comments:
Post a Comment