ಕೊಪ್ಪಳ ಸೆ. ೦೪ (ಕ ವಾ) ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಸೆ. ೧೭ ರಂದು ಸಡಗರ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ರಮಣದೀಪ್ ಚೌಧರಿ ಅವರು ಹೇಳಿದರು.
ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ದೇಶಕ್ಕೆ ೧೯೪೭ ರ ಆಗಸ್ಟ್ ೧೫ ರಂದು ಸ್ವಾತಂತ್ರ್ಯ ದೊರೆಯಿತು. ಆದರೆ ಹೈದ್ರಾಬಾದ್ ನಿಜಾಮರ ಆಡಳಿತಕ್ಕೆ ಒಳಪಟ್ಟ ಪ್ರದೇಶಕ್ಕೆ ೧೯೪೮ ರ ಸೆ. ೧೭ ರಂದು ಅಂದರೆ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ದೊರೆಯಿತು. ಇದರ ಸವಿ ನೆನಪಿಗಾಗಿ ಹೈದ್ರಾಬಾದ್-ಕರ್ನಾಟಕ ಪ್ರದೇಶಗಳಲ್ಲಿ ವಿಮೋಚನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಷ್ಟೆ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸೆ. ೧೭ ರಂದು ಬೆಳಿಗ್ಗೆ ೮ ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಬೆ. ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವರು. ಶಾಲಾ ಮಕ್ಕಳು, ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್ಸ್ ಮ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣ್ಕುಮಾರ್ ಜಿ.ಎಲ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಟಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಗರಸಭೆ ಉಪಾಧ್ಯಕ್ಷ ಬಾಳಪ್ಪ ಬಾರಕೇರ, ಶಿವಾನಂದ ಹೊದ್ಲೂರ, ಮಹೇಶ್ ಸುರ್ವೆ ಮುಂತಾದ ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
ತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹೈದ್ರಾಬಾದ್-ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಸೆ. ೧೭ ರಂದು ಗೌರಿ-ಗಣೇಶ ಹಬ್ಬದ ಆಚರಣೆ ಇರುವುದರಿಂದ ಅಂದು ಸಂಜೆ ಶಾಲಾ ಮಕ್ಕಳಿಂದ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ನಗರದ ಸಾರ್ವಜನಿಕ ಕಟ್ಟಡಗಳು, ವಾಣಿಜ್ಯ ಮಳಿಗೆ ಹಾಗೂ ಪ್ರಮುಖ ವೃತ್ತಗಳಿಗೆ ವಿಶೇಷ ದೀಪಾಲಂಕಾರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ರಮಣದೀಪ್ ಚೌಧರಿ ಅವರು ಮನವಿ ಮಾಡಿದರು.

0 comments:
Post a Comment