PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಸೆ.೨೮ (ಕ ವಾ) ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಪ್ರವಾಸಿಗರನ್ನು ಆಕರ್ಷಿಸುವಂತೆ ಅಭಿವೃದ್ಧಿಗೊಳಿಸುವ ಅಗತ್ಯವಿದೆ ಎಂದು ಕೊಪ್ಪಳದ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ ಶಿರಹಟ್ಟಿ ಹೇಳಿದರು.
     ಕೊಪ್ಪಳ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಪ್ರವಾಸಿ ಅಧಿಕಾರಿಗಳ ಕಛೇರಿಯಲ್ಲಿ  ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಹಾಗೂ ಸ್ಥಳಗಳ ಪರಿಚಯ ಮಾಡಿಕೊಡುವ ವೆಬ್‌ಸೈಟನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ಕೊಪ್ಪಳ ಜಿಲ್ಲೆಯು ಪೌರಾಣಿಕವಾಗಿ ಮತ್ತು ಐತಿಹಾಸಿಕವಾಗಿ ಸಾಕಷ್ಟು ಮಹತ್ವದ ಸ್ಥಳಗಳನ್ನು ಒಳಗೊಂಡಿದೆ. ಕೊಪ್ಪಳ ಮತ್ತು ಬಹದ್ದೂರಬಂಡಿ ಕೋಟೆ, ಜೈನ ಬಸದಿಗಳು, ಇಂದ್ರಕೀಲ ಪರ್ವತ, ಅಶೋಕನ ಶಿಲಾ ಶಾಸನಗಳು, ಆನೆಗೊಂದಿ ಸೇತುವೆ, ಶಿಲಾಯುಗದ ಮೋರೇರ ಮನೆಗಳು, ವರ್ಣಚಿತ್ರಗಳು ಇವುಗಳಲ್ಲಿ ಪ್ರಮುಖವಾಗಿವೆ.  ಪ್ರವಾಸೋದ್ಯಮದ ಕೊರತೆಯಿಂದಾಗಿ ಸೊರಗಿರುವ ಅವುಗಳನ್ನು ಅಭಿವೃದ್ಧಿಗೊಳಿಸಿದಲ್ಲಿ ಜಿಲ್ಲೆಯು ಕೂಡ ಒಂದು ಅತ್ಯುತ್ತಮ ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳಲಿದೆ. ಅಲ್ಲದೆ ಕಾರವಾರ ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರವಾಸಿ
      ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ ಎಸ್. ತಳುಕೇರಿ ಮಾತನಾಡಿ, ಜಿಲ್ಲೆಯು ಸಾಕಷ್ಟು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಈ ಪ್ರವಾಸಿ ಸ್ಥಳಗಳಿಗೆ ಜಿಲ್ಲಾ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ಬಹಳಷ್ಟು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಇನ್ನಷ್ಟು ಅಭಿವೃದ್ಧಿಪಡಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು. ಇಲಾಖೆಯ ಅನ್ನಪೂರ್ಣ ತೆಗ್ಗಿನಮಠ, ಜಿಲ್ಲೆಯ ಐತಿಹಾಸಿಕ ಪ್ರವಾಸಿ ಸ್ಥಳಗಳನ್ನು ಪರಿಚಯಿಸಿದರು.


ಸ್ಥಳಗಳನ್ನು ಅಭಿವೃದ್ಧಿಪಡಿಸಿದ ಮಾದರಿಯಲ್ಲಿ ಇಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಿ, ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡಬೇಕಿದೆ.  ಪ್ರವಾಸೋದ್ಯಮ ಇಲಾಖೆ ಈ ನಿಟ್ಟಿನಲ್ಲಿ ಶ್ರಮಿಸುವ ಅಗತ್ಯವಿದೆ ಎಂದರು.

Advertisement

0 comments:

Post a Comment

 
Top