PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. ೦೧ (ಕ ವಾ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಕರ್ನಾಟಕ ಸರ್ಕಾರವು ಬರುವ ಡಿಸೆಂಬರ್ ೦೬ರಂದು ಮೈಸೂರು ವಿಶ್ವವಿದ್ಯಾನಿಲಯದ ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಏ-Sಇಖಿ)ಗೆ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ಡಿಸೆಂಬರ್ ೨೭ರಂದು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಎಖಈ) ಹಾಗೂ  ಕಾಲೇಜು ಉಪನ್ಯಾಸಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆಗೆ (Uಉಅ-ಓಇಖಿ) ೪೫ ದಿನಗಳ ವಿಶೇಷ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
    ಆಸಕ್ತರು ಅ. ೦೫ ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕೇಂದ್ರದ ಸಂಯೋಜನಾಧಿಕಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪ ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.

ಅ.೦೨ ರಂದು ಕುಷ್ಟಗಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು.
ಕೊಪ್ಪಳ, ಅ.೦೧ (ಕ ವಾ) ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹನುಮಸಾಗರ ಇವರುಗಳ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಜಾತಿ ವಿಭಾಗ ಘಟಕದ ಅಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅ.೦೨ ರಂದು ಸಂಜೆ ೭ ಗಂಟೆಗೆ ಜಿಲ್ಲೆಯ ಕುಷ್ಟಗಿಯ ಡಾ|| ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
     ಕುಷ್ಟಗಿ ಪುರಸಭೆ ಸದಸ್ಯೆ ಜ್ಯೋತಿ ಸೇಬಿನಕಟ್ಟಿ ಹಾಗೂ ಸೈಯ್ಯದ್ ಮುಲ್ಲಾ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕೊಪ್ಪಳ ಜಿಲ್ಲಾಧ್ಯಕ್ಷ ಮಹ್ಮದ್ ನಜೀರ್‌ಸಾಬ್ ಮೂಲಿಮನಿ ಅಧ್ಯಕ್ಷತೆ ವಹಿಸುವರು. ಕುಷ್ಟಗಿ ತಾಲೂಕಾ ರೈತ ಸಂಘದ ಅಧ್ಯಕ್ಷ ವೀರಪ್ಪ ಜೀಕೇರಿ, ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ಮಳಶಟ್ಟಿ, ಚಿದಾನಂದಪ್ಪ ಬಡಿಗೇರ, ದುಂಡಪ್ಪ ಬಿಜಾಪೂರ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ ತಿಳಿಸಿದ್ದಾರೆ.
ಬೇಕರಿ ಹಾಗೂ ಗೃಹೋಪಯೋಗಿ ಉತ್ಪನ್ನಗಳ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, ಅ.೦೧ (ಕರ್ನಾಟಕ ವಾರ್ತೆ): ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ  ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ) ಇವರ ವತಿಯಿಂದ ಬೇಕರಿ ಮತ್ತು ಗೃಹೋಪಯೋಗಿ ಉತ್ಪನ್ನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.
     ಅಕ್ಟೋಬರ್ ೦೭ ರಿಂದ ಆರಂಭಗೊಳ್ಳಲಿರುವ ಈ ತರಬೇತಿಯು ೧೫ ದಿನಗಳ ಕಾಲ ನಡೆಯಲಿದೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಆಸಕ್ತ ೧೮ ರಿಂದ ೪೫ ವರ್ಷದೊಳಗಿನ ನಿರುದ್ಯೋಗಿ ಯುವಜನತೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ತರಬೇತಿ ಪಡೆಯಲಿಚ್ಛಿಸುವವರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ) ಹಳಿಯಾಳ (ಉತ್ತರ ಕನ್ನಡ) ಈ ವಿಳಾಸಕ್ಕೆ ಕೂಡಲೇ ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ : ೦೮೨೮೪-೨೨೦೮೦೭, ಮೊಬೈಲ್: ೯೪೮೩೪೮೫೪೮೯, ೯೪೮೨೧೮೮೭೮೦ ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.     
ಗೌರಿ ಗಣೇಶ ಹಬ್ಬ ಗಂಗಾವತಿಯಲ್ಲಿ ಬನಾಯೇಂಗೆ ಮಂದಿರ್ ಹಾಡು ನಿಷೇಧ.
ಕೊಪ್ಪಳ ಅ. ೦೧ (ಕ ವಾ) ಗೌರಿ-ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಪಾಲನೆಯ ಸಲುವಾಗಿ ಗಂಗಾವತಿ ನಗರದಲ್ಲಿ ಅ. ೦೨ ರಿಂದ ೦೮  ರವರೆಗೆ 'ಬನಾಯೇಂಗೆ ಮಂದಿರ್' ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ಅಥವಾ ವಿಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಆದೇಶ ಹೊರಡಿಸಿದ್ದಾರೆ.
     ಗೌರಿ-ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಗಂಗಾವತಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ, ಸಾರ್ವಜನಿಕ ಹಿತಾಸಕ್ತಿ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ ಕಲಂ ೩೫ (೧)(ಇ) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಗಂಗಾವತಿ ನಗರದಲ್ಲಿ ಅ. ೦೨ ರಿಂದ ಅ. ೦೮ ರವರೆಗೆ 'ಬನಾಯೇಂಗೆ ಮಂದಿರ್' ಎಂಬ ಹಾಡನ್ನು ಸಾರ್ವಜನಿಕವಾಗಿ ಹಾಡದಂತೆ ಮತ್ತು ಆಡಿಯೋ ರೂಪದಲ್ಲಿ ಬಿತ್ತರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರದಸ/ದ್ವಿದಸ ನೇಮಕಾತಿ ಪರೀಕ್ಷೆ ನಿಷೇಧಾಜ್ಞೆ ಜಾರಿ
ಕೊಪ್ಪಳ ಅ. ೦೧ (ಕ ವಾ)ಕರ್ನಾಟಕ ಲೋಕ ಸೇವಾ ಆಯೋಗವು ಪ್ರದಸ ಮತ್ತು ದ್ವಿದಸ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು  ಅ. ೦೩ ಮತ್ತು ೦೪ ರಂದು ಕೊಪ್ಪಳ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಆದೇಶ ಹೊರಡಿಸಿದ್ದಾರೆ.
     ಅ. ೦೩ ರಂದು ಜಿಲ್ಲೆಯ ೩೫ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅ. ೦೪ ರಂದು ೪೧ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.  ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅ. ೦೩ ಮತ್ತು ೦೪ ರಂದು ಬೆಳಿಗ್ಗೆ ೦೬ ಗಂಟೆಯಿಂದ ಸಂಜೆ ೦೬ ಗಂಟೆಯವರೆಗೆ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ನಿಷೇಧಾಜ್ಞೆ ಅನ್ವಯ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.  ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶಕ್ಕೆ ನಿರ್ಬಂಧವಿದೆ.  ಅಲ್ಲದೆ ನಿಷೇಧಿತ ವಲಯದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವಂತಿಲ್ಲ.  ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.


Advertisement

0 comments:

Post a Comment

 
Top