PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಅ.೦೧ (ಕ ವಾ) ಪ್ರಸ್ತುತ ದಿನಮಾನಗಳಲ್ಲಿ ಹಿರಿಯ ನಾಗರೀಕರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರು ತಮ್ಮ ಶಾರೀರಿಕ ಹಾಗೂ ಮಾನಸಿಕ ಮೌಲ್ಯಗಳ ರಕ್ಷಣೆಗಾಗಿ ವೃದ್ಧಾಶ್ರಮಗಳನ್ನು ಸೇರುತ್ತಿರುವುದು ಹೆಚ್ಚಾಗುತ್ತಿದೆ. ಇದು ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಲು ಕಾರಣಾವಾಗಿದ್ದು, ಸಾಮಾಜಿಕ ದೃಷ್ಠಿಯಿಂದ ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹಿರಿಯ ನ್ಯಾಯವಾದಿ ವ್ಹಿ.ಎಮ್.ಭೂಸನೂರಮಠ ಹೇಳಿದರು.
     ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾ ನಿರತ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿ
     ಹಿಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಸಮಾಜದಲ್ಲಿ ಇಂದು ಬಹಳಷ್ಟು ವಿಭಕ್ತ ಕುಟುಂಬಗಳಿರುವುದರಿಂದ ಮಾನವೀಯ ಮೌಲ್ಯ, ಅನುಕಂಪ ಕಡಿಮೆಯಾಗಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಅಸಹಾಯಕರಾದ ತಂದೆ ತಾಯಿಗಳು ಇಂದು ಆತಂಕದಲ್ಲಿ ದಿನ ದೂಡುವಂತಾಗಿದೆ. ಅವರಿಗೆ ತಮ್ಮ ಮಕ್ಕಳಿಂದ ಮನೆಯಲ್ಲಿ ದೊರಕುತ್ತಿದ್ದ ಗೌರವ, ಪ್ರೀತಿ, ಆದರ, ಆಹಾರ, ವಸತಿ ಇತ್ಯಾದಿ ಮೂಲಭೂತ ಸೌಕರ್ಯಗಳು ಕಡಿಮೆಯಾಗುತ್ತಿವೆ. ಇದರಿಂದ ಸಾಕಷ್ಟು ನೋವನುಭವಿಸುವ ಆ ಹಿರಿ ಜೀವಗಳು ಮನೆ ತೊರೆದು, ವೃದ್ಧಾಶ್ರಮ ಸೇರುತ್ತಿವೆ. ಸಾಮಾಜಿಕ ವ್ಯವಸ್ಥೆ ಬುಡಮೇಲಾಗಿರುವುದರಿಂದ ಇಂದು ಹಿರಿಯರಿಗೆ ರಕ್ಷಣೆ ಇಲ್ಲವಾಗಿದೆ. ಮಕ್ಕಳನ್ನು ಹೆತ್ತು, ಹೊತ್ತು, ಬೆಳೆಸಿ, ದೊಡ್ಡವರನ್ನಾಗಿ ಮಾಡಿದ ಹಿರಿಯ ನಾಗರೀಕರನ್ನು ಅಲಕ್ಷಿಸುವುದು, ಹಿಂಸಿಸುವುದು, ಪೀಡಿಸುವುದು ಅಮಾನವೀಯವಾಗಿದೆ. ಕೆಲವೊಂದು ಸಂದರ್ಭದಲ್ಲಿ ತಮ್ಮ ಪೋಷಕರ ಅಂತ್ಯ ಸಂಸ್ಕಾರಕ್ಕೂ ಮಕ್ಕಳು ಬಾರದಿರುವುದು ಇಂದಿನ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಮುಪ್ಪು ನಿಶ್ಚಿತವಾಗಿದ್ದು, ತಾರುಣ್ಯದಲ್ಲಿರುವ ಇಂದಿನ ಮಕ್ಕಳು ಬಡತನವಿರಲಿ, ಸಿರಿತನವಿರಲಿ ಜನ್ಮ ಕೊಟ್ಟಂತಹ ತಮ್ಮ ತಂದೆ ತಾಯಿಯನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳಿ ಎಂದು ಸಲಹೆ ನೀಡಿದರು.
     ಸರ್ಕಾರ ಹಿರಿಯ ನಾಗರೀಕರನ್ನು ಸಬಲೀಕರಣಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಿದ್ದು, ವೃದ್ಧಾಶ್ರಮ, ಸಾರಿಗೆಯಲ್ಲಿ ರಿಯಾಯಿತಿ, ಮಾಶಾಸನ ಇತ್ಯಾದಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ಅಲ್ಲದೆ ಕೇಂದ್ರ ಸರ್ಕಾರವು ನಿಸ್ಸಹಾಯಕ ಹಿರಿಯ ನಾಗರೀಕರಿಗೆ ಕಾನೂನಿನ ವ್ಯಾಪ್ತಿಯಲ್ಲಿ ನ್ಯಾಯ ಒದಗಿಸಲು ೨೦೦೭ ರಲ್ಲಿ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ ಅಧಿನಿಯಮವನ್ನು ಜಾರಿಗೆ ತಂದಿದೆ. ಈ ಕಾಯ್ದೆಯಡಿ ಪ್ರತಿ ಜಿಲ್ಲೆಗಳಲ್ಲಿ ಮಂಡಳಿಗಳನ್ನು ರಚಿಸಲಾಗಿದ್ದು, ಉಪ ಆಯುಕ್ತರು ಈ ಮಂಡಳಿಯ ಅಧ್ಯಕ್ಷರಾಗಿರುತ್ತಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸದಸ್ಯರಾಗಿದ್ದು, ನಿಯಂತ್ರಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಹಿರಿಯ ನಾಗರೀಕರು ನೇರವಾಗಿ ಮಂಡಳಿಯ ಸದಸ್ಯರ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದ್ದು, ಸಮಸ್ಯೆ ದಾಖಲಿಸಿದ ೩೦ ದಿನಗಳೊಳಗಾಗಿ ಇತ್ಯರ್ಥಗೊಳಿಸಲು ಈ ಅಧಿನಿಯಮದಲ್ಲಿ ತಿಳಿಸಲಾಗಿದೆ.  ಎಲ್ಲ ಇಲಾಖೆಗಳ ಅಧಿಕಾರಿಗಳು ಹಿರಿಯರ ಸಮಸ್ಯೆಗಳಿಗೆ ಮಾನವೀಯವಾಗಿ ಸಾಮಾಜಿಕ ಬದ್ಧತೆಯಿಂದ ಸ್ಪಂದಿಸುವಂತೆ ವಿ.ಎಂ. ಭೂಸನೂರಮಠ ಅವರು ಮನವಿ ಮಾಡಿದರು.
     ಇನ್ನೋರ್ವ ಅತಿಥಿ ಉಪನ್ಯಾಸಕರಾಗಿ ಆಗಮಿಸಿದ್ದ ಹಿರಿಯ ನ್ಯಾಯವಾದಿ ಎಸ್.ರುದ್ರಯ್ಯ ಮಾತನಾಡಿ, ಮಕ್ಕಳು ಬೆಳೆದಂತೆಲ್ಲ ತಂದೆ ತಾಯಿ ಮೇಲಿನ ಪ್ರೀತಿ ಕಡಿಮೆಯಾಗುತ್ತದೆ. ಮನೆಯಲ್ಲಿ ಹೊಂದಾಣಿಕೆ ಇಲ್ಲದಾಗ ಮೊದಲು ಬಲಿಯಾಗುವವರು ಈ ಹಿರಿಯ ನಾಗರೀಕರೇ. ಇದನ್ನು ತಪ್ಪಿಸಲು ಪೋಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡಿದ್ದೇ ಆದಲ್ಲಿ, ಮುಂದೆ ಮುಪ್ಪಿನ ಕಾಲದಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಇಂದಿನ ಮಕ್ಕಳಿಗೆ ಕಷ್ಟದ ಅನುಭವ ಆಗಬೇಕಿದೆ. ಇದು ಮಕ್ಕಳು ಹಿರಿಯರನ್ನು ಗೌರವಿಸುವ, ಮಾನವೀಯ ಮೌಲ್ಯದಿಂದ ನೋಡುವ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.
     ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಗದೀಶ ಕೆಂಪಲಿಂಗಣ್ಣನವರ್ ಅವರು, ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಹಿರಿಯ ನಾಗರಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಜನಸಂಖ್ಯೆಯ ಶೇಕಡಾ ೭ ರಷ್ಟು ಹಿರಿಯ ನಾಗರಿಕರಿರುವುದಾಗಿ ಅಂದಾಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ೯೭,೨೯೪ ಹಿರಿಯ ನಾಗರಿಕರಿದ್ದಾರೆ. ಇಲಾಖೆಯಿಂದ ಇದುವರೆಗೂ ೩೦,೩೬೦ ಹಿರಿಯ ನಾಗರಿಕರಿಗೆ ಗುರುತಿನ ಚೀಟಿಗಳನ್ನು ಸ್ವಯ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ನೀಡಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರದ ಅನುದಾನದಲ್ಲಿ ಕುಕನೂರಿನ ವಿದ್ಯಾನಂದ ಗುರುಕುಲ ವೃದ್ಧಾಶ್ರಮ ಹಾಗೂ ಭಾಗ್ಯನಗರದ ಮೈತ್ರಿ ವೃದ್ಧಾಶ್ರಮ ಎಂಬ ಎರಡು ವೃದ್ಧಾಶ್ರಮಗಳನ್ನು ನಡೆಸಲಾಗುತ್ತಿದ್ದು, ಸುಮಾರು ೫೦ ಜನ ವೃದ್ಧರು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಅಲ್ಲದೇ ಹಿರಿಯ ನಾಗರೀಕರಿಗೆ ಬಸ್ ಪ್ರಯಾಣ ದರದಲ್ಲಿ ಶೇಕಡಾ ೨೫ ರಷ್ಟು ರಿಯಾಯಿತಿ ಸೌಲಭ್ಯ ನೀಡಲಾಗಿದೆ. ಜಿಲ್ಲೆಯಲ್ಲಿ ೬೯,೮೬೯ ಜನರು ಸರ್ಕಾರದ ವಿವಿಧ ಯೋಜನೆಯಡಿ ವೃದ್ಧಾಪ್ಯ ವೇತನ ಪಡೆಯುತ್ತಿದ್ದಾರೆ. ಹಿರಿಯ ನಾಗರೀಕರ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲು ಜಿಲ್ಲೆಯಲ್ಲಿ ೨೦೧೪ನೇ ಆಗಸ್ಟ್ ತಿಂಗಳಿನಿಂದ ೧೦೯೦ ಟೋಲ್ ಫ್ರೀ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
     ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ ಹಿರಿಯ ನಾಗರೀಕರನ್ನು ಹಾಗೂ ಕಳೆದ ಸೆ.೧೫ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರೀಕರಿಗಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಶಸ್ತಿ ಗಳಿಸಿದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಸಮಾರಂಭದಲ್ಲಿ ಭಾಗವಹಿಸಿದ್ದ ಹಿರಿಯ ನಾಗರೀಕರು ಉದ್ಘಾಟಿಸಿದ್ದು ವಿಶೇಷವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನಾಧಿಕಾರಿ ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಮಂದಾಕಿನಿ, ಹಿರಿಯ ನಾಗರೀಕರ ಸಹಾಯವಾಣಿಯ ರಮೇಶ ಮೇಟಿ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವಾ ನಿರತ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ನಾಗರಿಕರು ಉಪಸ್ಥಿತರಿದ್ದರು. 

ನಾಚರಣೆ ಕಾಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.  

Advertisement

0 comments:

Post a Comment

 
Top