ಕೊಪ್ಪಳ, ಅ.೨೬ (ಕ ವಾ) ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜೀವ್‌ಗಾಂಧಿ ಖೇಲ್ ಅಭಿಯಾನ ಗ್ರಾಮೀಣ ಕ್ರೀಡಾ ಕೂಟದ ಗುಂಪು ೦೩ ರ ಹ್ಯಾಂಡ್‌ಬಾಲ್ ಮತ್ತು ಫುಟ್‌ಬಾಲ್ ಕ್ರೀಡೆಗಳನ್ನು ನ.೦೨ ರಿಂದ ನ.೦೪ ರವರೆಗೆ ವಿಜಯಪುರದ ಡಾ|| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದಂತಹ ಸ್ಪರ್ದಿಗಳು ಮಾತ್ರ ಈ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಈ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಮತ್ತು ಫುಟ್‌ಬಾಲ್ ಸ್ಪರ್ಧೆಯಲ್ಲಿ ಭಾಗವಹಿಸುವ ಕೊಪ್ಪಳ ಜಿಲ್ಲೆಯ ಕ್ರೀಡಾ ಪಟುಗಳು ಅ.೦೨ ರಂದು ಮಧ್ಯಾಹ್ನ ೦೨ ಗಂಟೆಯೊಳಗಾಗಿ ವಿಜಯಪುರದ ಡಾ||ಬಿ.ಆರ್.ಅಂಬೇಡ್ಕರ, ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು ಮತ್ತು ತಮ್ಮ ಜಿಲ್ಲಾ ತಂಡದ ಧ್ವಜದೊಂದಿಗೆ ಸಂಜೆ ೪.೦೦ ಘಂಟೆಗೆ ನಡೆಯುವ ಪಥ ಸಂಚಲನದಲ್ಲಿ ಖಡ್ಡಾಯವಾಗಿ ಭಾಗವಹಿಸಬೇಕು. ಭಾಗವಹಿಸುವ ಕ್ರೀಡಾ ಪಟುಗಳು ನಿಗದಿತ ನಮೂನೆಯಲ್ಲಿ ತಮ್ಮ ಜನ್ಮ ದಿನಾಂಕ ಪ್ರಮಾಣ ಪತ್ರ, ಬ್ಯಾಂಕ ಖಾತೆಯ ನಂಬರ ಮತ್ತು ವಿಳಾಸದೊಂದಿಗೆ ಪೂರ್ಣ ಮಾಹಿತಿಯನ್ನು ತೆಗೆದುಕೊಂಡು ಹೋಗಬೇಕು. ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳಿಗೆ ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕೇವಲ ಲಘು ಹಾಸಿಗೆ, ಹೊದಿಕೆಗಳನ್ನು ಮಾತ್ರ ತೆಗೆದುಕೊಂಡು ಹೋಗಬಹುದಾಗಿದೆ. ಅಲ್ಲದೆ, ಜಿಲ್ಲೆಯಿಂದ ಭಾಗವಹಿಸುವ ಸ್ಪರ್ಧಿಗಳಿಗೆ ಕೊಪ್ಪಳದಿಂದ ವಿಜಯಪುರ ಜಿಲ್ಲೆಯವರೆಗೆ ಹೋಗಿ ಬರುವ ಸಾಮಾನ್ಯ ಬಸ್ ದರವನ್ನು ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳದ ಸಹಾಯಕ ನಿರ್ದೇಶಕಿ ಡಾ|| ಶಾರದಾ ನಿಂಬರಗಿ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : ೦೮೫೩೯-೨೦೧೪೦೦ ನ್ನು ಸಂಪರ್ಕಿಸಬಹುದಾಗಿದೆ.
ಅ.೩೦ ರಿಂದ ಉಡುಪಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ.
ಕೊಪ್ಪಳ, ಅ.೨೬ (ಕ ವಾ) ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಜೀವ್‌ಗಾಂಧಿ ಖೇಲ್ ಅಭಿಯಾನ ಗ್ರಾಮೀಣ ಕ್ರೀಡಾ ಕೂಟದ ಗುಂಪು ೦೧ ರ ಅಥ್ಲೆಟಿಕ್ಸ್, ವ್ಹಾಲಿಬಾಲ್, ಬ್ಯಾಡ್ಮಿಂಟನ್ ಕ್ರೀಡೆಗಳು ಅ.೩೦ ರಿಂದ ನ.೦೧ ರವರೆಗೆ ಉಡುಪಿ ಜಿಲ್ಲೆಯ ಮಹಾತ್ಮಗಾಂಧಿ, ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗಿದೆ.
ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ನಡೆದ ಅಥ್ಲೆಟಿಕ್ಸ್ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ಮಾತ್ರ ಈ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬಹುದಾಗಿದೆ. ಈ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಕೊಪ್ಪಳ ಜಿಲ್ಲೆಯ ಕ್ರೀಡಾ ಪಟುಗಳು ಅ.೩೦ ರಂದು ಮಧ್ಯಾಹ್ನ ೧೨ ಗಂಟೆಯೊಳಗಾಗಿ ಉಡುಪಿ ಜಿಲ್ಲೆಯ ಮಹಾತ್ಮಗಾಂಧಿ, ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ತಮ್ಮ ಜಿಲ್ಲಾ ತಂಡದ ಧ್ವಜದೊಂದಿಗೆ ಸಂಜೆ ೦೪ ಘಂಟೆಗೆ ನಡೆಯುವ ಪಥ ಸಂಚಲನದಲ್ಲಿ ಖಡ್ಡಾಯವಾಗಿ ಭಾಗವಹಿಸಬೇಕು. ಈ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ನಿಗದಿತ ನಮೂನೆಯಲ್ಲಿ ತಮ್ಮ ಜನ್ಮ ದಿನಾಂಕ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ಸಂಖ್ಯೆ ಮತ್ತು ವಿಳಾಸ ಇತ್ಯಾದಿ ಪೂರ್ಣ ಮಾಹಿತಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾ ಪಟುಗಳಿಗೆ ಉಡುಪಿ ಜಿಲ್ಲೆಯಲ್ಲಿ ಸಾಮಾನ್ಯ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕೇವಲ ಲಘು ಹಾಸಿಗೆ, ಹೊದಿಕೆಗಳನ್ನು ತೆಗೆದುಕೊಂಡು ಹೋಗಬಹುದಾಗಿದೆ. ಅಲ್ಲದೆ, ಜಿಲ್ಲೆಯಿಂದ ಭಾಗವಹಿಸುವ ಸ್ಪರ್ಧಿಗಳಿಗೆ ಕೊಪ್ಪಳ ದಿಂದ ಉಡುಪಿ ಜಿಲ್ಲೆಯವರೆಗೆ ಹೋಗಿ ಬರುವ ಸಾಮಾನ್ಯ ಬಸ್ ದರವನ್ನು ನೀಡಲಾಗುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳದ ಸಹಾಯಕ ನಿರ್ದೇಶಕಿ ಡಾ|| ಶಾರದಾ ನಿಂಬರಗಿ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : ೦೮೫೩೯-೨೦೧೪೦೦ ನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ.
ಕೊಪ್ಪಳ, ಅ.೨೬ (ಕ ವಾ) ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅ.೨೬ ಮತ್ತು ೨೭ ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅ.೨೬ ರಂದು ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೦೨ ರವರೆಗೆ ಕಾರಟಗಿ ಪಟ್ಟಣದಲ್ಲಿ ನಡೆಯುವ ವಿವಿಧ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ ೦೩ ರಿಂದ ಸಾಯಂಕಾಲ ೦೬ ಗಂಟೆ ವರೆಗೆ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ನಡೆಸುವರು. ಅ.೨೭ ರಂದು ಬೆಳಿಗ್ಗೆ ೦೯.೩೦ ಗಂಟೆಗೆ ತಾಲೂಕಿನ ಗಂಗಾವತಿಯಲ್ಲಿ ನಡೆಯುವ ಶ್ರೀ ವಾಲ್ಮೀಕಿ ಭವನದ ಅಡಿಗಲ್ಲು ಸಮಾರಂಭದಲ್ಲಿ ಹಾಗೂ ತಾಲೂಕಾ ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅದೇ ದಿನ ಮಧ್ಯಾಹ್ನ ೦೧.೧೫ ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯುವ ಜಿಲ್ಲಾ ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು ಅದೇ ದಿನ ಮಧ್ಯಾಹ್ನ ೦೩.೩೦ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಅ.೨೭ ರಂದು ಮಹರ್ಷಿ ವಾಲ್ಮೀಕಿ ಜಯಂತಿ.
ಕೊಪ್ಪಳ, ಅ.೨೬ (ಕ ವಾ) ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅ.೨೭ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ಅಮರನಾಥ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನೆ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ಪರೀಕ್ಷಿತ್‌ರಾಜ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ ೦೯ ಗಂಟೆಗೆ ಶ್ರೀ ಸಿರಸಪ್ಪಯ್ಯನಮಠದಿಂದ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದ ವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಕಲ್ಲೇಶ ತಿಳಿಸಿದ್ದಾರೆ.
ಆಮಂತ್ರಣ ಪತ್ರಿಕೆ ಲಗತ್ತಿಸಿದೆ.

ಭಾಗ್ಯನಗರ ಪಟ್ಟಣ ಪಂಚಾಯಿತಿಗೆ ಮುಖ್ಯಾಧಿಕಾರಿ ನೇಮಕ
ಕೊಪ್ಪಳ, ಅ.೨೬ (ಕ ವಾ) ಕೊಪ್ಪಳ ತಾಲೂಕಿನ ಭಾಗ್ಯನಗರ ಗ್ರಾಮ ಪಂಚಾಯತಿಯನ್ನು ಪಟ್ಟಣ
ಪಂಚಾಯತಿಯನ್ನಾಗಿ ಸರ್ಕಾರ ಮೇಲ್ದರ್ಜೆಗೇರಿಸಿದ್ದು, ಇದೀಗ ಇದರ ಮುಖ್ಯಾಧಿಕಾರಿಯನ್ನಾಗಿ ಯಲಬುರ್ಗಾ ಪಟ್ಟಣ
ಪಂಚಾಯಿತಿಯ ಸಮುದಾಯ ಸಂಘಟನಾಧಿಕಾರಿ ಮಂಜುನಾಥ ಬೆಲ್ಲದ್ ಅವರನ್ನು ನೇಮಿಸಿ, ಪ್ರಭಾರಿ ಜಿಲ್ಲಾಧಿಕಾರಿ ಡಾ||
ಜಿ.ಎಲ್.ಪ್ರವೀಣಕುಮಾರ ಆದೇಶ ಹೊರಡಿಸಿದ್ದಾರೆ.
ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ಮುಂದಿನ ಸರ್ಕಾರದ ಆದೇಶದವರೆಗೂ ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣ ಪಂಚಾಯಿತಿಗೆ ಯಲಬುರ್ಗಾ ಪಟ್ಟಣ ಪಂಚಾಯಿತಿಯ ಸಮುದಾಯ ಸಂಘಟನಾಧಿಕಾರಿ ಮಂಜುನಾಥ ಬೆಲ್ಲದ್ ಇವರನ್ನು ಪ್ರಭಾರ ಮುಖ್ಯಾಧಿಕಾರಿಯನ್ನಾಗಿ ನಿಯುಕ್ತಿಗೊಳಿಸಿ ಹಾಗೂ ಮುಂದಿನ ಆದೇಶದ ವರೆಗೆ ನೇಮಕಾತಿ ಮಾಡಿ ಪ್ರಭಾರಿ ಜಿಲ್ಲಾಧಿಕಾರಿ ಡಾ|| ಜಿ.ಎಲ್.ಪ್ರವೀಣಕುಮಾರ ಆದೇಶ ಹೊರಡಿಸಿದ್ದಾರೆ.

0 comments:
Post a Comment