ಕೊಪ್ಪಳ-26- ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಮತ್ತು ಶ್ರೀಮತಿ ಮಂಜುಳಾ ಎಸ್ ಕೊಟ್ನೆಕಲ್ ಇವರಿಗೆ ಚಿತ್ರದುರ್ಗದ ಶ್ರೀ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಶರಣ ದಂಪತಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಅವರ ಸಾಹಿತ್ಯಿಕ ಮತ್ತು ವಿಶೇಷವಾಗಿ ಚಿತ್ರದುರ್ಗದ ಶ್ರೀ ಮುರುಘಾಮಠದವರು ವಿದ್ಯಾರ್ಥಿಗಳಿಗಾಗಿ ನಡೆಸುವ ವಚನ ಕಮ್ಮಟ ಪರೀಕ್ಷೆಯನ್ನು ಸುಮಾರು ೧೧-೧೨ ವರ್ಷಗಳಿಂದ ನಡೆಸುತ್ತಾ ಬಂದಿರುವ ಸೇವೆಯನ್ನು ಪರಿಗಣಿಸಿ ಮುರುಘಾಮಠದ ಶ್ರೀಗಳು ದಂಪತಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
Subscribe to:
Post Comments (Atom)
0 comments:
Post a Comment