ಕೊಪ್ಪಳ ಅ. ೨೮ (ಕ ವಾ) ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಜನ್ಮ ದಿನಾಚರಣೆಯನ್ನು ನ. ೧೦ ರಂದು ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಹೇಳಿದರು.
ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಭಕ್ತ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ನ. ೧೦ ರಂದು ಅದ್ಧೂರಿಯಾಗಿ ಆಚರಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ೫೦ ಸಾವಿರ ರೂ. ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲು ಸರ್ಕಾರ ೨೫ ಸಾವಿರ ರೂ. ಅನುದಾನ ಒದಗಿಸಿದೆ. ಟಿಪ್ಪು ಸುಲ್ತಾನ್‌ನ ದೇಶಭಕ್ತಿ ಹಾಗೂ ಶೌರ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲೆಯ ಎಲ್ಲ ಪದವಿಪೂರ್ವ, ಪ್ರೌಢ ಹಾಗೂ ಮಾಧ್ಯಮಿಕ ಶಾಲೆಗಳಲ್ಲಿ ಭಾಷಣ ಸ್ಪಧೆಯನ್ನು ಆಯೋಜಿಸಲಾಗುವುದು. ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನ. ೧೦ ರಂದು ಬೆಳಿಗ್ಗೆ ೮-೩೦ ಗಂಟೆಗೆ ನಗರ ಪೊಲೀಸ್ ಠಾಣೆ ಬಳಿಯ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಗಣ್ಯಮಾನ್ಯರಿಂದ ಹೂಮಾಲೆ ಅರ್ಪಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ಬೆಳಿಗ್ಗೆ ೯-೩೦ ಗಂಟೆಗೆ ಟಿಪ್ಪು ಸುಲ್ತಾನ್ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಸಿರಸಪ್ಪಯ್ಯನ ಮಠ ಬಳಿಯ ನೂರಾನಿ ಮಸೀದಿ ಆವರಣದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯು ಗಡಿಯಾರ ಕಂಭ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಸಾಹಿತ್ಯ ಭವನವನ್ನು ತಲುಪಲಿದೆ. ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು. ಬೆ. ೧೧-೩೦ ಗಂಟೆಗೆ ಸಾಹಿತ್ಯ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ. ಮೈಸೂರು ಹುಲಿ ಟಿಪ್ಪುಸುಲ್ತಾನ್ ಅವರ ಜೀವನ ಚರಿತ್ರೆ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಕುರಿತ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಗುವುದು. ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಟಿಪ್ಪು ಸುಲ್ತಾನ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಮನವಿ ಮಾಡಿದರು.
ಟಿಪ್ಪು ಸುಲ್ತಾನ್ ಜಯಂತಿ ದಿನದಂದು ಹಾಗೂ ಮುನ್ನಾ ದಿನದಂದು, ನಗರದ ಜವಾಹರ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಯನ್ನು ಸ್ವಚ್ಛಗೊಳಿಸಲು ಅಲ್ಲದೆ ಮೆರವಣಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಟಿಪ್ಪು ಸುಲ್ತಾನ್ ಅವರ ದೇಶಭಕ್ತಿ ಹಾಗೂ ಜೀವನ ಚರಿತ್ರೆ ಕುರಿತ ಸಂದೇಶ ಎಲ್ಲರಿಗೂ ತಲುಪುವಂತೆ ಮಾಡುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಮುಖಂಡರಿಗೆ ಮತ್ತು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.
ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಆದೇಶ ಹೊರಡಿಸಿರುವುದು ಶ್ಲಾಘನೀಯ ಕ್ರಮವಾಗಿದ್ದು, ಇದರಿಂದ
ಸಭೆಯಲ್ಲಿ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಡಿವೈಎಸ್‌ಪಿ ರಾಜೀವ್, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಟಿ. ಸಮಾಜದ ಮುಖಂಡರುಗಳಾದ ಅಮ್ಜದ್ ಪಟೇಲ್, ಪೀರಾಹುಸೇನ್ ಹೊಸಳ್ಳಿ, ಕೆ.ಎಂ. ಸೈಯದ್, ಗೌಸ್ ಸಾಬ್ ಸರದಾರ್, ಪಾಶಾ ಕಾಟನ್, ಅಬ್ದುಲ್ ಅಜೀಜ್, ಎಂ.ಎ. ಮಾಜಿದ್ ಸಿದ್ದಿಕಿ, ಮೆಹಬೂಬ್ ಮಸ್ಕಿ, ಸಾದಿಕ್ ಅಲಿ, ಶಿವಾನಂದ ಹೊದ್ಲೂರ ಮುಂತಾದವರು ಉಪಸ್ಥಿತರಿದ್ದು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕುರಿತು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ದೇಶಭಕ್ತರಿಗೆ ಗೌರವ ಸಲ್ಲಿಸಿದಂತಾಗಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. ಮಂಜುನಾಥ ಗೊಂಡಬಾಳ ಅವರು ಈ ಸಂದರ್ಭದಲ್ಲಿ ಮಾತನಾಡಿ, ಯುವಚೇತನ ಶಿವರಾಜ ತಂಗಡಗಿ ವೇದಿಕೆ ವತಿಯಿಂದ ಟಿಪ್ಪು ಸುಲ್ತಾನ್ ಅವರ ೨೦೦೦ ಭಾವಚಿತ್ರಗಳನ್ನು ಶಾಲಾ, ಕಾಲೇಜುಗಳಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ತಿಳಿಸಿದರು.ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಭಕ್ತ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಇದೇ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮವನ್ನು ನ. ೧೦ ರಂದು ಅದ್ಧೂರಿಯಾಗಿ ಆಚರಿಸಲಾಗುವುದು. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ೫೦ ಸಾವಿರ ರೂ. ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲು ಸರ್ಕಾರ ೨೫ ಸಾವಿರ ರೂ. ಅನುದಾನ ಒದಗಿಸಿದೆ. ಟಿಪ್ಪು ಸುಲ್ತಾನ್‌ನ ದೇಶಭಕ್ತಿ ಹಾಗೂ ಶೌರ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲೆಯ ಎಲ್ಲ ಪದವಿಪೂರ್ವ, ಪ್ರೌಢ ಹಾಗೂ ಮಾಧ್ಯಮಿಕ ಶಾಲೆಗಳಲ್ಲಿ ಭಾಷಣ ಸ್ಪಧೆಯನ್ನು ಆಯೋಜಿಸಲಾಗುವುದು. ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ನ. ೧೦ ರಂದು ಬೆಳಿಗ್ಗೆ ೮-೩೦ ಗಂಟೆಗೆ ನಗರ ಪೊಲೀಸ್ ಠಾಣೆ ಬಳಿಯ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಗಣ್ಯಮಾನ್ಯರಿಂದ ಹೂಮಾಲೆ ಅರ್ಪಿಸುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಗುವುದು. ಬೆಳಿಗ್ಗೆ ೯-೩೦ ಗಂಟೆಗೆ ಟಿಪ್ಪು ಸುಲ್ತಾನ್ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಸಿರಸಪ್ಪಯ್ಯನ ಮಠ ಬಳಿಯ ನೂರಾನಿ ಮಸೀದಿ ಆವರಣದಿಂದ ಪ್ರಾರಂಭವಾಗಲಿದೆ. ಮೆರವಣಿಗೆಯು ಗಡಿಯಾರ ಕಂಭ, ಜವಾಹರ ರಸ್ತೆ, ಅಶೋಕ ವೃತ್ತ ಮೂಲಕ ಸಾಹಿತ್ಯ ಭವನವನ್ನು ತಲುಪಲಿದೆ. ಮೆರವಣಿಗೆಯಲ್ಲಿ ಎಲ್ಲಾ ಸಂಘಟನೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು, ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಬೇಕು. ಬೆ. ೧೧-೩೦ ಗಂಟೆಗೆ ಸಾಹಿತ್ಯ ಭವನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಮಾರಂಭ ಜರುಗಲಿದ್ದು, ಸಮಾರಂಭದಲ್ಲಿ ಗಣ್ಯಾತಿಗಣ್ಯರೆಲ್ಲರು ಭಾಗವಹಿಸಲಿದ್ದಾರೆ. ಮೈಸೂರು ಹುಲಿ ಟಿಪ್ಪುಸುಲ್ತಾನ್ ಅವರ ಜೀವನ ಚರಿತ್ರೆ ಕುರಿತು ಹಾಗೂ ಜಯಂತಿ ಕಾರ್ಯಕ್ರಮದ ಮಹತ್ವ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಟಿಪ್ಪು ಸುಲ್ತಾನ್ ಕುರಿತ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಗುವುದು. ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗುವುದು. ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಟಿಪ್ಪು ಸುಲ್ತಾನ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ಮನವಿ ಮಾಡಿದರು.
ಟಿಪ್ಪು ಸುಲ್ತಾನ್ ಜಯಂತಿ ದಿನದಂದು ಹಾಗೂ ಮುನ್ನಾ ದಿನದಂದು, ನಗರದ ಜವಾಹರ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಯನ್ನು ಸ್ವಚ್ಛಗೊಳಿಸಲು ಅಲ್ಲದೆ ಮೆರವಣಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಟಿಪ್ಪು ಸುಲ್ತಾನ್ ಅವರ ದೇಶಭಕ್ತಿ ಹಾಗೂ ಜೀವನ ಚರಿತ್ರೆ ಕುರಿತ ಸಂದೇಶ ಎಲ್ಲರಿಗೂ ತಲುಪುವಂತೆ ಮಾಡುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಮುಖಂಡರಿಗೆ ಮತ್ತು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.
ಮೈಸೂರು ಹುಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಆದೇಶ ಹೊರಡಿಸಿರುವುದು ಶ್ಲಾಘನೀಯ ಕ್ರಮವಾಗಿದ್ದು, ಇದರಿಂದ
ಸಭೆಯಲ್ಲಿ ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಡಿವೈಎಸ್‌ಪಿ ರಾಜೀವ್, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಟಿ. ಸಮಾಜದ ಮುಖಂಡರುಗಳಾದ ಅಮ್ಜದ್ ಪಟೇಲ್, ಪೀರಾಹುಸೇನ್ ಹೊಸಳ್ಳಿ, ಕೆ.ಎಂ. ಸೈಯದ್, ಗೌಸ್ ಸಾಬ್ ಸರದಾರ್, ಪಾಶಾ ಕಾಟನ್, ಅಬ್ದುಲ್ ಅಜೀಜ್, ಎಂ.ಎ. ಮಾಜಿದ್ ಸಿದ್ದಿಕಿ, ಮೆಹಬೂಬ್ ಮಸ್ಕಿ, ಸಾದಿಕ್ ಅಲಿ, ಶಿವಾನಂದ ಹೊದ್ಲೂರ ಮುಂತಾದವರು ಉಪಸ್ಥಿತರಿದ್ದು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕುರಿತು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.
0 comments:
Post a Comment