PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಅ. ೩೧ (ಕ ವಾ) ಭಾರತದ ಪ್ರಧಾನಮಂತ್ರಿಗಳಾಗಿದ್ದ ದಿವಂಗತ ಇಂದಿರಾಗಾಂಧಿಯವರು ಹುತಾತ್ಮರಾದ ಅ. ೩೧ ರ ದಿನವನ್ನು ರಾಷ್ಟ್ರೀಯ ಏಕತಾ ದಿವಸವನ್ನಾಗಿ ಮತ್ತು ಉಕ್ಕಿನ ಮನುಷ್ಯ ದಿ: ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಏಕತಾ ದಿವಸವನ್ನಾಗಿ ಆಚರಿಸುವಂತೆ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
     ಪ್ರಭಾರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ರಾಷ್ಟ್ರೀಯ ಸಂಕಲ್ಪ ದಿವಸದ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ, ರಾಷ್ಟ್ರದ ಸ್ವಾತಂತ್ರ್ಯವನ್ನು ಕಾಪಾಡಲು ದೇಶ ರಕ್ಷಣೆ ಮಾಡಲು, ದೇಶದ ರಕ್ಷಣೆ ಮಾಡಲು ಹಾಗೂ ದೇಶದ ಸುಭದ್ರತೆ ಕಾರ್ಯದಲ್ಲಿ ತನು-ಮನ-ಧನದಿಂದ ಕಾರ್ಯವೆಸಗಲು ನಿಷ್ಠೆಯಿಂದ ಪ್ರತಿಜ್ಞೆ ಮಾಡುತ್ತೇವೆ.  ಎಂದಿಗೂ ಹಿಂಸೆಯ ಪ್ರಯೋಗ ಮಾಡುವುದಿಲ್ಲ, ಧರ್ಮ, ಜಾತಿ, ಭಾಷೆ, ಪ್ರಾಂತ
ಮುಂತಾದ ವಿಷಯಗಳಲ್ಲದೆ ರಾಜಕೀಯ ಹಾಗೂ ಸಂವಿಧಾನಾತ್ಮಕವಾಗಿ ಇತ್ಯರ್ಥ ಮಾಡಲು ಪ್ರಯತ್ನಿಸಲಾಗುವುದು.  ಭಾರತೀಯ ಪ್ರಜೆಯಾದ ನಾವು ನಮ್ಮ ದೇಶದ ಪರಂಪರಾಗತ ಮೌಲ್ಯವಾದ ಅಹಿಂಸೆ ಮತ್ತು ತಾಳ್ಮೆಯಲ್ಲಿ ಅಪಾರ ನಂಬಿಕೆ ಇರಿಸಿದ್ದು, ಎಲ್ಲ ರೀತಿಯ ಭಯೋತ್ಪಾದನೆ ಮತ್ತು ಹಿಂಸಾಕೃತ್ಯಗಳನ್ನು ವಿರೋಧಿಸುತ್ತೇವೆ. ಶಾಂತಿ, ಸೌಹಾರ್ದತೆ ಹಾಗೂ ಪರಸ್ಪರ ತಿಳುವಳಿಕೆಯಿಂದ, ಸಾಮಾಜಿಕ ಬಾಂಧವ್ಯ ಹಾಗೂ ಒಡನಾಡಿಗಳ ಜೊತೆಗೂಡಿ ಮಾನವ ಜೀವ ಹಾಗೂ ಮೌಲ್ಯಗಳನ್ನು ನಾಶಪಡಿಸುವ ವಿನಾಶಕಾರಿ ಶಕ್ತಿಗಳ ವಿರುದ್ಧ ಹೋರಾಡುವುದಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
     ರಾಷ್ಟ್ರೀಯ ಏಕತಾ ದಿವಸದ ನಿಮಿತ್ಯ ಪ್ರತಿಜ್ಞಾ ವಿಧಿ ಬೋಧಿಸಿ, ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನಮ್ಮನ್ನು ಅರ್ಪಿಸಿಕೊಳ್ಳುತ್ತೇವೆ ಮತ್ತು ನಮ್ಮ ದೇಶ ಬಾಂಧವರಲ್ಲಿ ಈ ಸಂದೇಶ ಸಾರಲು ಶ್ರಮಿಸುತ್ತೇವೆ.  ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯನ್ನು ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಪೂರ್ತಿಯನ್ನು ಕಾಪಾಡುವುದಾಗಿ ಪ್ರಮಾಣ ಮಾಡುತ್ತೇವೆ.  ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಮ್ಮದೇ ಆದ ಕೊಡುಗೆಯನ್ನು ನೀಡುತ್ತೇವೆಂದು ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 
     ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ರಾಷ್ಟ್ರೀಯ ಏಕತಾ ದಿವಸ ಹಾಗೂ ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಬೋಧಿಸಿದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

Advertisement

0 comments:

Post a Comment

 
Top