ಕೊಪ್ಪಳ, ಅ. ೦೭ (ಕ ವಾ) ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಕೊಪ್ಪಳ ಜಿಲ್ಲೆಯ ಯುವಕರಿಗೆ ೩೦ ದಿನಗಳ ಉಚಿತ ಮನೆ ವೈರಿಂಗ್ ಮತ್ತು ಮೋಟಾರ್ ರಿವೈಂಡಿಂಗ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವವರು ಕೊಪ್ಪಳ ಜಿಲ್ಲೆಗೆ ಸೇರಿದವರಾಗಿರಬೇಕು. ೧೮ ರಿಂದ ೪೫ ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ಕನಿಷ್ಠ ೮ ನೇ ತರಗತಿ ಉತ್ತೀಣರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅ. ೨೮ ಅರ್ಜಿ ವಿತರಿಸಲು ಹಾಗೂ ಸ್ವೀಕರಿಸಲು ಕೊನೆ ದಿನಾಂಕವಾಗಿದ್ದು, ಅ. ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅಭ್ಯರ್ಥಿಗಳ ಆಯ್ಕೆಗಾಗಿ ಸಂದರ್ಶನ ನಡೆಯಲಿದೆ. ಅ. ೩೦ ರಿಂದ ತರಬೇತಿ ತರಗತಿಗಳು ಆರಂಭವಾಗಲಿವೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ, ದೂರವಾಣಿ ಸಂಖ್ಯೆ: ೦೮೫೩೯-೨೩೧೦೩೮ ಇವರನ್ನು ಸಂಪರ್ಕಿಸಬಹುದಾಗಿದೆ.

0 comments:
Post a Comment