PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೨೬ (ಕ ವಾ) ಕೊಪ್ಪಳದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯನ್ನು ನ. ೨೮ ಮತ್ತು ೨೯ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಕ್ರೀಡಾ ಕೂಟದ ಯಶಸ್ವಿಗೆ ಸಕಲ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
     ಕೊಪ್ಪಳದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯೋಜಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಕೊಪ್ಪಳ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯನ್ನು ನ. ೨೮ ಮತ್ತು ೨೯ ರಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ.  ಕ್ರೀಡಾಕೂಟಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸಮರ್ಪಕ ವಸತಿ, ಊಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು.  ಕ್ರೀಡಾಪಟುಗಳಿಗೆ ಈ ಸಂಬಂಧ ಯಾವುದೇ ಗೊಂದಲ ಉಂಟಾಗದಂತೆ ಕ್ರೀಡಾಕೂಟ ನಡೆಯುವ ಸ್ಥಳದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ, ಮಾಹಿತಿ ನೀಡುವಂತಾಗಬೇಕು.  ಬಾಲಕ, ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕೈಗೊಳ್ಳಬೇಕು.  ಕ್ರೀಡಾಪಟುಗಳು ವಾಸ್ತವ್ಯ ಮಾಡುವ ಸ್ಥಳದಿಂದ, ಜಿಲ್ಲಾ ಕ್ರೀಡಾಂಗಣಕ್ಕೆ ತೆರಳಲು ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.  ಕ್ರೀಡಾಂಗಣದ ಸ್ವಚ್ಛತೆ ಹಾಗೂ ತಾತ್ಕಾಲಿಕ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಬೇಕು.  ಕ್ರೀಡಾಪಟುಗಳಿಗೆ ಶುದ್ಧ ಕುಡಿಯುವ ನೀರಿನ ಮತ್ತು ಸಮರ್ಪಕ ಊಟೋಪಹಾರದ ವ್ಯವಸ್ಥೆಗೊಳಿಸಬೇಕು.  ರಾಜ್ಯ ಮಟ್ಟದ ಕ್ರೀಡಾಕೂಟ ಇದಾಗಿರುವದರಿಂದ, ಕ್ರೀಡಾಕೂಟ ಮುಗಿಸಿಕೊಂಡು ತೆರಳುವ ಬೇರೆ ಜಿಲ್ಲೆಗಳ ಕ್ರೀಡಾಪಟುಗಳು ತೃಪ್ತಿಕರ ಭಾವನೆಯಿಂದ ಹಿಂದಿರಗಬೇಕು.  ಅಲ್ಲದೆ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಗಳು ಕೊಪ್ಪಳ ಜಿಲ್ಲೆಗೆ ಲಭಿಸುವಂತಾಗಬೇಕು.  ಒಟ್ಟಾರೆಯಾಗಿ ಕ್ರೀಡಾ ಕೂಟ ಯಶಸ್ವಿಗೊಳ್ಳಬೇಕಿದ್ದಲ್ಲಿ, ಸಮರ್ಪಕ ವಸತಿ, ಊಟ, ಶುದ್ಧ ಕುಡಿಯುವ ನೀರು ಹಾಗೂ ಸೂಕ್ತ ಮೂಲಭೂತ ಸೌಕರ್ಯಗಳ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು.  ಕ್ರೀಡಾಕೂಟ ಯಶಸ್ವಿಗೊಳಿಸಲು ರಚಿಸಲಾಗಿರುವ ವಿವಿಧ ಉಪಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
      ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿ   ಆಯೋಜನೆ ಕುರಿತಂತೆ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಅವರು, ಕಲಬುರಗಿ ವಿಭಾಗ, ಬೆಳಗಾವಿ, ಬೆಂಗಳೂರು, ಮೈಸೂರು ವಿಭಾಗ ಮಟ್ಟದಿಂದ ಪ್ರಾಥಮಿಕ, ಪ್ರೌಢಶಾಲಾ ವಿಭಾಗದ ತಲಾ ಒಂದು ತಂಡಗಳು ಭಾಗವಹಿಸಲಿವೆ.  ಇದರಲ್ಲಿ ಬಾಲಕ ಮತ್ತು ಬಾಲಕಿಯರ ಪ್ರತ್ಯೇಕ ತಂಡಗಳು ಪಾಲ್ಗೊಳ್ಳಲಿವೆ.  ರಾಜ್ಯದ ಕ್ರೀಡಾ ವಸತಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ತಲಾ ಒಂದು ತಂಡ ಪಾಲ್ಗೊಳ್ಳಲಿದೆ.  ಪ್ರತಿ ಒಂದು ತಂಡದಿಂದ ತಲಾ ೧೨ ಕ್ರೀಡಾಪಟುಗಳು ಇರಲಿದ್ದು, ಪ್ರತಿ ತಂಡಕ್ಕೆ ಒಬ್ಬ ತರಬೇತುದಾರ ಮತ್ತು ಒಬ್ಬ ಮೇಲ್ವಿಚಾರಕರು ತಂಡದೊಂದಿಗೆ ಆಗಮಿಸುವರು.  ಕ್ರೀಡಾಕೂಟದಲ್ಲಿ ಒಟ್ಟು ೪೦ ನಿರ್ಣಾಯಕರು ಮತ್ತು ಸಹಾಯಕ ಸಿಬ್ಬಂದಿ ಪಾಲ್ಗೊಳ್ಳುವರು.  ಕ್ರೀಡಾಪಟುಗಳು ಮತ್ತು ಇತರೆ ಸಿಬ್ಬಂದಿ ಸೇರಿದಂತೆ ಒಟ್ಟು ೨೯೨ ಜನ ಕ್ರೀಡಾಕೂ
     ಕ್ರೀಡಾಕೂಟದ ಯಶಸ್ವಿಗಾಗಿ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ, ಸ್ವಾಗತ, ತಾಂತ್ರಿಕ, ವಸತಿ, ಸಾರಿಗೆ ವ್ಯವಸ್ಥೆ, ಊಟೋಪಹಾರ, ಮಾಧ್ಯಮ, ರಕ್ಷಣಾ, ಪ್ರಚಾರ, ನ್ಯಾಯ ನಿರ್ಣಾಯಕ, ವೇದಿಕೆ, ಲೆಕ್ಕ ಪರಿಶೋಧನೆ ಸೇರಿದಂತೆ ಒಟ್ಟು ೧೨ ವಿವಿದಧ ಉಪಸಮಿತಿಗಳನ್ನು ರಚಿಸಲು ನಿರ್ಣಯ ಕೈಗೊಳ್ಳಲಾಯಿತು.
     ಸಭೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸುದರ್ಶನ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ. ಶಾರದಾ ನಿಂಬರಗಿ, ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಕ್ಕೆ ಆಗಮಿಸುವರು.  ಬಾಲಕಿಯರಿಗೆ ಮತ್ತು ಮಹಿಳಾ ಮೇಲ್ವಿಚಾರಕರಿಗೆ ಕೊಪ್ಪಳದ ಕ್ರೀಡಾ ವಸತಿ ಶಾಲೆ ಮತ್ತು ಪೊಲೀಸ್ ಭವನದಲ್ಲಿ ವಸತಿ ಸೌಕರ್ಯ ಕಲ್ಪಿಸಲಾಗುವುದು.  ಬಾಲಕರಿಗೆ ಮತ್ತು ಪುರುಷ ಮೇಲ್ವಿಚಾರಕರಿಗೆ ಕೊಪ್ಪಳ ಗವಿಮಠದ ಯಾತ್ರಿ ನಿವಾಸ ಮತ್ತು ಪ್ರಸಾದ ನಿಲಯದಲ್ಲಿ ವಸತಿಗಾಗಿ ವ್ಯವಸ್ಥೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು.  ಅಧಿಕಾರಿಗಳಿಗೆ ಪ್ರವಾಸಿ ಮಂದಿರ ಮತ್ತು ನಿರ್ಣಾಯಕರಿಗೆ ಸರ್ಕಾರಿ ನೌಕರರ ಭವನ ಮತ್ತು ಲಾಡ್ಜ್‌ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆಗೊಳಿಸಲಾಗುವುದು ಎಂದು ವಿವರಣೆ ನೀಡಿದರು.

Advertisement

0 comments:

Post a Comment

 
Top