PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ-23- ಮಂಗಳವಾರದಂದು ಇರಕಲ್‌ಗಡ ಗ್ರಾಮದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇರಕಲ್‌ಗಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನಾಂಕ ೨೪/೧೧/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.

Advertisement

0 comments:

Post a Comment

 
Top