ಕೊಪ್ಪಳ, ನ. ೨೭ (ಕ ವಾ) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನ. ೩೦ ರಂದು ನಡೆಯಬೇಕಿದ್ದ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಪರಿಶೀಲನಾ ಸಭೆಯನ್ನು ಮುಂದೂಡಲಾಗಿದೆ.
ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ನ. ೨೪ ರಿಂದ ೨೦೧೬ ರ ಜ. ೦೧ ರವರೆಗೆ ಜಾರಿಯಲ್ಲಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನ. ೩೦ ರಂದು ಜರುಗಬೇಕಿದ್ದ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಯುವ ವಿಜ್ಞಾನಿ ಪ್ರಶಸ್ತಿ : ಅರ್ಜಿ ಆಹ್ವಾನ
ಕೊಪ್ಪಳ, ನ.೨೬ (ಕರ್ನಾಟಕ ವಾರ್ತೆ) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರುಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ಯುವ ವಿಜ್ಞಾನಿ ೨೦೧೫-೧೬ ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
೯ ರಿಂದ ೧೨ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಸಂಯೋಜಕರಾದ ಮರಿಶಾಂತವೀರ ಶೆಟ್ಟರ, ಮೊ :೯೪೪೯೫೧೫೯೧೧ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಛೇರಿ, ಕೊಪ್ಪಳ ಇವರಿಂದ ಪಡೆದು ಭರ್ತಿ ಮಾಡಿ, ಡಿ.೦೮ ರೊಳಗಾಗಿ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇಶಕರು ತಿಳಿಸಿದ್ದಾರೆ.
ಶಿಕ್ಷಕರ ಹುದ್ದೆ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.
ಕೊಪ್ಪಳ, ನ.೨೭ (ಕರ್ನಾಟಕ ವಾರ್ತೆ) : ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ, ಕೊಪ್ಪಳ ಇವರಿಂದ ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನ.೨೬ ರಂದು ಇಲಾಖೆಯ ಉಪನಿರ್ದೇಶಕರ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಮೂಲ ದಾಖಲೆಗಳ ಎರಡು ಸೆಟ್ ಝರಾಕ್ಸ್ ಪ್ರತಿಗಳನ್ನು ಪರಿಶೀಲನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕೊಪ್ಪಳ ಇವರ ಕಛೇರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಶ್ಯಾಮಸುಂದರ್ ಅವರು ತಿಳಿಸಿದ್ದಾರೆ.
ಕೌಶಲ್ಯ ತರಬೇತಿ ಕಾರ್ಯಕ್ರಮ ನೋಂದಣಿಗೆ ಸೂಚನೆ.
ಕೊಪ್ಪಳ, ನ.೨೭ (ಕರ್ನಾಟಕ ವಾರ್ತೆ) ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ) ವತಿಯಿಂದ ಡಿಸೆಂಬರ್ ತಿಂಗಳಿನಲ್ಲಿ ಪ್ರಥಮ ಹಂತದ ಕಛೇರಿ ಸಿಬ್ಬಂದಿಗಳ ಕೆಲಸ ನಿರ್ವಹಣಾ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೊಸದಾಗಿ ಕೆಲಸಕ್ಕೆ ಸೇರುವ ಯುವ ಜನತೆ ಕಛೇರಿ ಕೆಲಸಗಳ ಅನುಭವವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಎಷ್ಟೋ ಬಾರಿ ಹಲವರು ಕೆಲಸ ನಿರ್ವಹಣೆ ಗೊತ್ತಿಲ್ಲದೇ ಒಳ್ಳೆಯ ಕೆಲಸವನ್ನೂ ಬಿಟ್ಟಿದ್ದಾರೆ. ಇದನ್ನು ತಪ್ಪಿಸಲು ಶಿಬಿರದಲ್ಲಿ ಉತ್ತಮ ಮಾತನಾಡುವ ಕಲೆ, ಪತ್ರ ವ್ಯವಹಾರ, ಕಡತಗಳ ನಿರ್ವಹಣೆ, ಜವಾಬ್ದಾರಿ ನಿರ್ವಹಣೆ, ವಿವಿಧ ಸಂಘ ಸಂಸ್ಥೆ, ಇಲಾಖೆಗಳ ಸಂಪರ್ಕ, ಹಣಕಾಸು ನಿರ್ವಹಣೆ, ದೂರವಾಣಿಯಲ್ಲಿ ಸಂದರ್ಶನ ಮಾಡುವುದು, ಕಛೇರಿಯ ಎಲ್ಲ ಸ್ಥರದ ಸಿಬ್ಬಂದಿಗಳ ಜೊತೆ ಆಂತರಿಕ ಸಂಬಂಧಗಳ ನಿರ್ವಹಣೆ, ಕಂಪ್ಯೂಟರ್‌ನ ಸಮರ್ಪಕ ಬಳಕೆ, ಇಂಟರ್‌ನೆಟ್ ಉಪಯೋಗ, ಸ್ಪೋಕನ್ ಇಂಗ್ಲೀಷ್, ಸಾರ್ವಜನಿಕವಾಗಿ ವ್ಯವಹರಿಸುವ ಕಲೆ ಮತ್ತು ಬ್ಯಾಂಕಿಂಗ್ ಹೀಗೆ ಹಲವಾರು ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು. ತರಬೇತಿ ಕಾರ್ಯಕ್ರಮವು ಡಿ.೧೪ ರಿಂದ ೨೦೧೬ ರ ಜನೇವರಿ ೦೩ ರವರೆಗೆ ೨೧ ದಿನಗಳ ಕಾಲ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು. ತರಬೇತಿಯು ಹೊಸದಾಗಿ ಉದ್ಯಮ ಆರಂಭಿಸಿರುವ ಉದ್ಯಮಿಗಳಿಗೂ ಪ್ರಯೋಜನವಾಗಲಿದ್ದು, ಸಂಸ್ಥೆಯ ನುರಿತ ಉಪನ್ಯಾಸಕರು, ವಿವಿಧ ಕಂಪನಿಗಳ ನಿರ್ವಹಣಾ ವ್ಯವಸ್ಥಾಪಕರು ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.
ಆಸಕ್ತ ಪಿ.ಯು.ಸಿ ಹಾಗೂ ಪದವೀಧರ ೧೮ ರಿಂದ ೪೫ ವಯೋಮಾನದ ಯುವಜನತೆ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆ, ದಾಂಡೇಲಿ ರಸ್ತೆ, ಉದ್ಯೋಗ ವಿದ್ಯಾನಗರ, ಹಳಿಯಾಳ-೫೮೧೩೨೯, ಉತ್ತರ ಕನ್ನಡ ಜಿಲ್ಲೆ, ದೂರವಾಣಿ ಸಂಖ್ಯೆ, ೯೪೮೨೧೮೮೭೮೦ ಅಥವಾ ೯೪೮೩೪೮೫೪೮೯ ಇವರನ್ನು ಸಂಪರ್ಕಿಸಬಹುದಾಗಿದೆ. ತರಬೇತಿಗೆ ಅಭ್ಯರ್ಥಿಗಳು ಡಿ.೦೯ ರಂದು ಸ್ವತಃ ಸಂಸ್ಥೆಗೆ ಬಂದು ತಮ್ಮ ನೊಂದಾವಣಿಯನ್ನು ಖಾತ್ರಿಪಡಿಸಬೇಕು.

0 comments:
Post a Comment