PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ನ.೨೫ (ಕ ವಾ)  ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಗೊಳ್ಳುವ ಜಿಲ್ಲೆಯ ಸ್ಪರ್ಧಾಳುಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿಯನ್ನು ತರಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಡಾ|| ಶಾರದಾ ನಿಂಬರಗಿ ಅವರು ಕ್ರೀಡಾಪಟುಗಳನ್ನು ಹಾರೈಸಿದರು.
     ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಂದೇ ಮಾತರಂ ಯುವ ಸಾಂಸ್ಕೃತಿಕ ಸೇವಾ ಸಂಘ (ರಿ), ಹಾಗೂ ಜಾಗೃತಿ ಸಾಂಸ್ಕೃತಿಕ ಗ್ರಾಮೀಣಾಭಿವೃದ್ಧಿ ಸೇವಾ ಸಂಘ (ರಿ), ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸಾಹಿತ್ಯ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿರುವ ಅತ್ಯುತ್ತಮ ಯುವ ಪ್ರತಿಭೆಗಳನ್ನು ಆಯ್ಕೆಗೊಳಿಸಿ, ನ.೩೦ ರಂದು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯು ಜಿಲ್ಲೆಯ ಸಂಘ, ಸಂಸ್ಥೆಗಳ ಸಂಪೂರ್ಣ ಸಹಕಾರವನ್ನು ಪಡೆದುಕೊಂಡು, ಈ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸ್ಪರ್ಧಾಳುಗಳು ತಮ್ಮ ಶಕ್ತಿ ಮೀರಿ ಪ್ರತಿಭೆಯನ್ನು ಪ್ರದರ್ಶಿಸಿ, ಜಿಲ್ಲೆಯ ಹೆಸರನ್ನು ಉನ್ನತ ಮಟ್ಟಕ್ಕೆ ಒಯ್ಯುವಲ್ಲಿ ಶ್ರಮಿಸಬೇಕು. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ಚುಟುಕುಗೊಳಿಸಲಾಗಿದ್ದು, ಎಲ್ಲಾ ಸ್ಪರ್ಧಿಗಳು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
     ಪ್ರಾಸ್ತಾವಿಕವಾಗಿ ಮಾತನಾಡಿದ ವಂದೇ ಮಾತರಂ ಯುವ ಸಾಂಸ್ಕೃತಿಕ ಸೇವಾ ಸಂಘದ ಗೌರವ ಸಲಹೆಗಾರ ರಾಜಶೇಖರ ಅಂಗಡಿ, ಸಮಾಜ ಕಟ್ಟುವಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದ್ದು, ಯುವಜನತೆ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ತಿಳಿದವರು ಯುವ
     ಜಾಗೃತಿ ಸಾಂಸ್ಕೃತಿಕ ಗ್ರಾಮೀಣಾಭಿವೃದ್ಧಿ ಸೇವಾ ಸಂಘದ (ರಿ) ಅಧ್ಯಕ್ಷರಾದ ಡಾ|| ಕೊಟ್ರೇಶ ಶೇಡ್ಮಿ ಹಾಗೂ ಕಾಯಕ ಯೋಗಿ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ಮತ್ತು ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಡಾ|| ಶ್ರೀನಿವಾಸ ಹ್ಯಾಟಿ ಅವರು ಜಂಟಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿರ್ಣಾಯಕರಾಗಿ ಆಗಮಿಸಿದ್ದ ಸಂಗೀತ ಶಿಕ್ಷಕರುಗಳಾದ  ದೇವರೆಡ್ಡಿ ಹಾಗೂ ಕವಿತಾ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ವಂದೇ ಮಾತರಂ ಯುವ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ರಾಕೇಶ ಕಾಂಬ್ಳೇಕರ್, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಜಗದಯ್ಯ ಸಾಲಿಮಠ, ಮಂಜುನಾಥ ಜಿ.ಗೊಂಡಬಾಳ, ವೆಂಕಟೇಶ ಈಳಿಗೇರ, ಸಂಗೀತ ಶಿಕ್ಷಕ ವೈ.ಎಸ್.ಭಜಂತ್ರಿ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸ್ಪರ್ಧಾಳುಗಳು ಉಪಸ್ಥಿತರಿದ್ದರು.
ಜನತೆಯನ್ನು ಹುರಿದುಂಬಿಸಿ, ಅವರನ್ನು ಸರಿ ದಾರಿಯಲ್ಲಿ ನಡೆಸಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು.  ಜಿಲ್ಲೆಯ ಯುವ ಸಮೂಹದಲ್ಲಿರುವ ಪ್ರತಿಭೆಯನ್ನು ಹೊರತರುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕಾರ್ಯಕ್ರಮವನ್ನು ಸರಳಗೊಳಿಸಲಾಗಿರುವುದು ಬೇಸರ ಮೂಡಿಸಿದೆ. ಆದರೂ ಕೂಡಾ ಸ್ಪರ್ಧಾಳುಗಳು ಉತ್ಸಾಹದಿಂದ ಯುವಜನೋತ್ಸವದಲ್ಲಿ ಪಾಲ್ಗೊಂಡಿರುವುದು ಅವರ ಪ್ರತಿಭೆಗೆ ಸಾಕ್ಷಿಯಾಗಿದೆ ಎಂದು ರಾಜಶೇಖರ ಅಂಗಡಿ ಅವರು ಹೇಳಿದರು.

Advertisement

 
Top