ಕೊಪ್ಪಳ.-21- ಸೋಮವಾರದಂದು ಯಲಬುರ್ಗ ತಾಲೂಕಿನ ತಳಕಲ್ ಗ್ರಾಮದ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ತಳಕಲ್ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ದಿನಾಂಕ ೨೩/೧೧/೨೦೧೫ ಬೆಳಿಗ್ಗೆ ೧೦:೦೦ ರಿಂದ ೦೪:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳು ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Subscribe to:
Post Comments (Atom)
0 comments:
Post a Comment