PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ನ.೩೦ (ಕ ವಾ) ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಸುರಕ್ಷತಾ ನೀತಿ-೨೦೧೫ ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮಾಲೋಚನಾ ಸಭೆಯನ್ನು ಡಿ.೦೧ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
     ರಾಜ್ಯ ಮಕ್ಕಳ ಸುರಕ್ಷತಾ ನೀತಿ-೨೦೧೫ ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳು, ಆಸಕ್ತರು ಈ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಅಭಿಪ್ರಾಯ ತಿಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಡಿ.೦೪ ರಂದು ಬಹಿರಂಗ ವಿಚಾರಣೆ ಮನವಿ ಆಹ್ವಾನ.
ಕೊಪ್ಪಳ, ನ.೩೦ (ಕ ವಾ)  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ಜಾತಿ ಜನಾಂಗಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಹೊಸದಾಗಿ ಸೇರಿಸಲು, ಪ್ರವರ್ಗ ಬದಲಾವಣೆ, ಪರ್ಯಾಯ ಪದ ಸೇರ್ಪಡೆ ಮತ್ತು ಕಾಗುಣಿತ ದೋಷ ತಿದ್ದುಪಡಿಗೆ ಸಂಬಂಧಿಸಿದಂತೆ  ಡಿ.೦೪ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಹಿರಂಗ ವಿಚಾರಣೆ ಏರ್ಪಡಿಸಿದ್ದು, ಮನವಿಗಳನ್ನು ಆಹ್ವಾನಿಸಲಾಗಿದೆ. 
     ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್. ಕಾಂತರಾಜ ಅವರು ಬಹಿರಂಗ ವಿಚಾರಣೆ ಸಭೆಯ ಅಧ್ಯಕ್ಷತೆ ವಹಿಸುವರು.  ಬಹಿರಂಗ ವಿಚಾರಣೆಯಲ್ಲಿ ನಾಗರೀಕರ ಯಾವುದೇ ವರ್ಗವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕೆಂದು ಬಂದ ಕೋರಿಕೆಗಳನ್ನು ಪರಿಶೀಲಿಸುವುದು ಮತ್ತು ಯಾವುದೇ ಹಿಂದುಳಿದ ವರ್ಗಗಳನ್ನು ಅಂತಹ ಪಟ್ಟಿಯಲ್ಲಿ ಹೆಚ್ಚಾಗಿ ಸೇರಿಸಲಾಗಿದೆ ಎಂದು ಅಥವಾ ಸೇರಿಸಲಾಗಿಲ್ಲವೆಂದು ಬಂದ ದೂರುಗಳ ವಿಚಾರಣೆ ನಡೆಸಲಾಗುವುದು.  ಅಲ್ಲದೆ ಹಿಂದುಳಿದ  ವರ್ಗಗಳಿಗಾಗಿ ಇರುವ ಅನೇಕ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲಿಸಲಾಗುವುದು. ಆಯೋಗದ ಪ್ರಕಾರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಂಘ ಸಂಸ್ಥೆಗಳಿಂದ, ಜಾತಿ, ಉಪಜಾತಿ, ಪಂಗಡ, ಉಪ ಪಂಗಡ, ಬುಡಕಟ್ಟು ಹಾಗೂ ಸಮೂಹಗಳ ಪರವಾಗಿ ಆಯೋಗಕ್ಕೆ ಮನವಿಗಳನ್ನು ಸಲ್ಲಿಸಬಹುದಾಗಿದೆ. 

ವಿಧಾನ ಪರಿಷತ್ ಚುನಾವಣೆ : ಕರಡು ಮತದಾರರ ಪಟ್ಟಿ ಪ್ರಕಟ- ಆಕ್ಷೇಪಣೆಗಳಿಗೆ ಆಹ್ವಾನ.

ಕೊಪ್ಪಳ, ನ.೩೦ (ಕ ವಾ) ವಿಧಾನಪರಿಷತ್ತಿಗೆ ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಚುನಾವಣೆ ನಡೆಸಲು ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿ. ೦೩ ರ ಒಳಗಾಗಿ ಸಲ್ಲಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ ಜಿ.ಎಲ್. ಅವರು ತಿಳಿಸಿದ್ದಾರೆ.
     ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಕರಡು ಮತದಾರರ ಪಟ್ಟಿಯನ್ನು ನ. ೨೭ ರಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ಎಲ್ಲ ತಹಸಿಲ್ದಾರರ ಕಚೇರಿ, ತಾ.ಪಂ. ಕಾರ್ಯನಿರ್ವಾಹಕರುಗಳ ಕಚೇರಿ, ಗ್ರಾಮ ಪಂಚಾಯತಿ ಕಚೇರಿ ಹಾಗೂ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.  ಪ್ರಕಟಿತ ಕರಡು ಮತದಾರರ ಪಟ್ಟಿ ಕುರಿತು ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿ. ೦೩ ರ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ, ಆಯಾ ತಾಲೂಕು ತಹಸಿಲ್ದಾರರ ಕಚೇರಿಯ ಚುನಾವಣೆ ಶಾಖೆಯಲ್ಲಿ ಖುದ್ದಾಗಿ ಲಿಖಿತ ಆಕ್ಷೇಪಣೆಯನ್ನು, ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳಾದ ಕೊಪ್ಪಳ ಅಪರ ಜಿಲ್ಲಾಧಿಕಾರಿ ಡಾ|| ಪ್ರವೀಣಕುಮಾರ್ ಜಿ.ಎಲ್ ತಿಳಿಸಿದ್ದಾರೆ. 
ವಿಧಾನಪರಿಷತ್ ಚುನಾವಣೆ ಕೊಪ್ಪಳ ಜಿಲ್ಲೆಯಲ್ಲಿ ೧೬೧ ಮತಗಟ್ಟೆ, ೨೯೮೮ ಮತದಾರರು.
ಕೊಪ್ಪಳ ನ. ೩೦ (ಕ ವಾ) ವಿಧಾನಪರಿಷತ್ತಿಗೆ ರಾಯಚೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ವ್ಯಾಪ್ತಿಯಲ್ಲಿ ೧೬೧ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ೨೯೮೮ ಮತದಾರರಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ತಿಳಿಸಿದ್ದಾರೆ.
     ವಿಧಾನಪರಿಷತ್ ಚುನಾವಣೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ೧೫೨ ಗ್ರಾಮ ಪಂಚಾಯತಿ ಕಚೇರಿ, ೦೪- ತಾಲೂಕಾ ಪಂಚಾಯತಿ ಕಚೇರಿ, ೦೧-ಜಿ.ಪಂ. ಕಚೇರಿ ಹಾಗೂ ೦೪-ನಗರಸಭೆ/ಪುರಸಭೆ/ಪ.ಪಂಚಾಯತಿ ಕಚೇರಿಗಳಲ್ಲಿ ಸೇರಿದಂತೆ ಒಟ್ಟು ೧೬೧ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮತದಾನ ಕೇಂದ್ರಗಳ ವಿವರ : ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೩೮, ತಾಲೂಕಾ ಪಂಚಾಯತಿ-೦೧, ಜಿಲ್ಲಾ ಪಂಚಾಯತಿ-೦೧ ಮತ್ತು ಕೊಪ್ಪಳ ನಗರಸಭೆ-೦೧ ಸೇರಿದಂತೆ ಒಟ್ಟು ೪೧ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು.  ಗಂಗಾವತಿ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೪೨, ತಾಲೂಕಾ ಪಂಚಾಯತಿ-೦೧, ನಗರಸಭೆ-೦೧ ಕಚೇರಿ ಸೇರಿದಂತೆ ಒಟ್ಟು ೪೪ ಮತದಾನ ಕೇಂದ್ರಗಳು. ಯಲಬುರ್ಗಾ ತಾಲೂಕಿನಲ್ಲಿ  ಗ್ರಾಮ ಪಂಚಾಯತಿ-೩೬, ತಾಲೂಕಾ ಪಂಚಾಯತಿ-೦೧, ಪಟ್ಟಣ ಪಂಚಾಯತಿ-೦೧ ಕಚೇರಿಗಳು ಸೇರಿದಂತೆ ಒಟ್ಟು ೩೮ ಮತದಾನ ಕೇಂದ್ರಗಳನ್ನು ಹಾಗೂ ಕುಷ್ಟಗಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ-೩೬, ತಾಲೂಕಾ ಪಂಚಾಯತಿ-೦೧, ಪುರಸಭೆ-೦೧ ಕಚೇರಿ ಸೇರಿದಂತೆ ಒಟ್ಟು ೩೮ ಮತದಾನ ಕೇಂದ್ರಗಳನ್ನು ತೆರೆಯಲಾಗುವುದು.
ಮತದಾರರ ವಿವರ : ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಸದಸ್ಯರು, ತಾಲೂಕಾ ಪಂಚಾಯತಿ ಸದಸ್ಯರು, ನಗರಸಭೆ/ಪುರಸಭೆ/ಪಟ್ಟಣ ಪಂಚಾಯತಿ ಸದಸ್ಯರು, ಸಂಸದರು, ಶಾಸಕರುಗಳು ಹಾಗೂ ವಿಧಾನಪರಿಷತ್ ಸದಸ್ಯರು ಮತದಾರರಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೨೯೮೮ ಮತದಾರರಿದ್ದಾರೆ.
     ಕೊಪ್ಪಳ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೭೨೯, ತಾಲೂಕಾ ಪಂಚಾಯತಿ-೨೬, ಜಿಲ್ಲಾ ಪಂಚಾಯತಿ-೨೭, ನಗರಸಭೆ-೩೧, ಒಬ್ಬರು ಸಂಸದರು ಹಾಗೂ ಒಬ್ಬರು ಶಾಸಕರು ಸೇರಿದಂತೆ ಒಟ್ಟು ೮೧೫ ಜನ ಮತದಾರರು ಮತ ಚಲಾಯಿಸಲಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೭೯೭, ತಾಲೂಕಾ ಪಂಚಾಯತಿ-೩೧, ನಗರಸಭೆ-೩೪, ಇಬ್ಬರು ಶಾಸಕರು ಸೇರಿದಂತೆ ಒಟ್ಟು ೮೬೪ ಜನ ಮತದಾರರಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೫೯೫, ತಾಲೂಕಾ ಪಂಚಾಯತಿ-೨೩, ಪಟ್ಟಣ ಪಂಚಾಯತಿ-೧೪, ಒಬ್ಬರು ವಿಧಾನ ಪರಿಷತ್ ಸದಸ್ಯರು ಹಾಗೂ ಒಬ್ಬರು ಶಾಸಕರು ಸೇರಿದಂತೆ ಒಟ್ಟು ೬೩೪ ಜನ ಮತದಾರರಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ಗ್ರಾಮ ಪಂಚಾಯತಿ-೬೨೪, ತಾಲೂಕಾ ಪಂಚಾಯತಿ-೨೨, ಪುರಸಭೆ-೨೮, ಒಬ್ಬರು ಶಾಸಕರು ಸೇರಿದಂತೆ ಒಟ್ಟು ೬೭೫ ಜನ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

Advertisement

0 comments:

Post a Comment

 
Top