PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ನ. ೨೪ (ಕ ವಾ)  ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಸಿ.ಜಿ. ಹುನಗುಂದ ಅವರು ನ. ೨೬ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಸಿ.ಜಿ. ಹುನಗುಂದ ಅವರು ಅಂದು ಬೆಳಿಗ್ಗೆ ೧೦-೩೦ ಗಂಟೆಗೆ ಕುಷ್ಟಗಿ ಪಟ್ಟಣಕ್ಕೆ ಆಗಮಿಸುವರು.  ನಂತರ ಇಲ್ಲಿನ ಶ್ರೀ ವೀರಮಹೇಶ್ವರ ಸಮುದಾಯ ಭವನದಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆ ಕುರಿತ ಜಾಗೃತಿ ಕಾರ್ಯಗಾರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಮಧ್ಯಾಹ್ನ ೨-೩೦ ಗಂಟೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಆಯೋಗ ಸದಸ್ಯರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.


Advertisement

 
Top