PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ. ೦೮ (ಕ ವಾ)ತೋಟಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಶೇ. ೯೦ ರ ಸಹಾಯಧನ ಮಂಜೂರಾತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
     ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳಿಗೆ ಹನಿ ನೀರಾವರಿ ಅಳವಡಿಸಲು ಶೇ. ೯೦ ರ ಸಹಾಯಧನವನ್ನು ಮಾರ್ಗಸೂಚಿಯನ್ವಯ ನೀಡಲು ಅವಕಾಶವಿದೆ.  ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.  ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿಗಳು ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top