ಕೊಪ್ಪಳ ಡಿ. ೦೫ (ಕ ವಾ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಹುಲಿಗೆಮ್ಮ ದೇವಿ ದೇವಸ್ಥಾನ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ, ಮಹಿಳಾ ಉದ್ದಿಮೆದಾರರ ಮತ್ತು ಗ್ರಾಹಕರ ಜಾಗೃತಿ ಕಾನೂನು ಅರಿವು ನೆರವು ಕಾರ್ಯಕ್ರಮ ಡಿ. ೦೭ ರಂದು ಸಂಜೆ ೫ ಗಂಟೆಗೆ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನ ಆವರಣದಲ್ಲಿ ನಡೆಯಲಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ. ನಾಗರತ್ನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹುಲಿಗೆಮ್ಮ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಚಂದ್ರಮೌಳಿ ಅಧ್ಯಕ್ಷತೆ ವಹಿಸುವರು. ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಬಿ. ದಶರಥ್, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ. ಶಾರದಾ ನಿಂಬರಗಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಎಪಿಎಂಸಿ ಕಾರ್ಯದರ್ಶಿ ಮರಿಬಸಪ್ಪ ಸಜ್ಜನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಬಿ.ಕೆ. ಹಿರೇಮಠ ಅವರು ಹೆಣ್ಣು ಮಗುವಿನ ರಕ್ಷಣೆ ಕುರಿತು ಹಾಗೂ ಹನುಮಂತರಾವ್ ಅವರು ಪೊಲೀಸ್ ದೂರು ಪ್ರಾಧಿಕಾರ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ ತಿಳಿಸಿದ್ದಾರೆ.

0 comments:
Post a Comment