PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಡಿ.೦೮ (ಕ ವಾ) ಸ್ತ್ರೀಶಕ್ತಿ ಸಂಘ ಹಾಗೂ ಒಕ್ಕೂಟದ ಸದಸ್ಯರಿಗೆ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ನೀಡಿ ಅವರನ್ನು ಮಹಿಳಾ ಉದ್ದಿಮೆದಾರರನ್ನಾಗಿ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಿ.ಪಿ.ವಸಂತಪ್ರೇಮಾ ಅವರು ಹೇಳಿದರು.
     ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಶ್ರೀ ಹುಲಿಗೆಮ್ಮ ದೇವಸ್ಥಾನ ಆಡಳಿತ ಸಮಿತಿ, ಹುಲಿಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹುಲಿಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದ್ದ ಸ್ತ್ರೀ ಶಕ್ತಿ ಸಂಘದ ಸದಸ್ಯರು ತಯಾರಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
     ಮಹಿಳೆಯರಿಗೆ ನಿಗಮದಿಂದ ಸಾಲ ಸೌಲಭ್ಯದ ಜೊತೆಗೆ ಕೌಶಲ್ಯಾಭಿವೃ
     ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ದಶರಥ ಉದ್ಘಾಟಿಸಿ, ಹೆಣ್ಣು ಮಕ್ಕಳ ರಕ್ಷಣೆ ಮತ್ತು ಪೊಲೀಸ್ ದೂರು ಪ್ರಾಧಿಕಾರದ ಬಗ್ಗೆ ಮಾಹಿತಿ ನೀಡಿದರು.
     ಹುಲಿಗೆಮ್ಮ ದೇವಸ್ಥಾನ ಸಮಿತಿಯ ಕಾರ್ಯನಿರ್ವಹಣಾಧಿಕಾರಿ ಸಿ.ಎಸ್.ಚಂದ್ರಮೌಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರುಗಳಾದ ಬಿ.ಕೆ.ಹಿರೇಮಠ, ರಾಜಣ್ಣ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು, ವಿವಿಧ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಸರೋಜಾ ಬಾಕಳೆ ನಿರೂಪಿಸಿದರು, ಅಭಿವೃದ್ಧಿ ನಿರೀಕ್ಷಕಿ ಸುಧಾ ಚಿದ್ರಿ ವಂದಿಸಿದರು. 

ದ್ಧಿ ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿಯ ಬಳಿಕ ಮಹಿಳೆಯರೇ ತಯಾರಿಸಿದ ಕೈಕಸುತಿ ಕಲೆಗಳ ವಸ್ತುಗಳು, ಸಂಡಿಗೆ, ಹಪ್ಪಳ, ಅಲಂಕಾರಿಕ ಆಭರಣ ಸಾಮಗ್ರಿಗಳನ್ನು ಮಾರಾಟ ಮಾಡಲಾಗುತ್ತದೆ. ಆ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು. 

Advertisement

0 comments:

Post a Comment

 
Top