PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ. ೧೮ (ಕ ವಾ) ಹೈದ್ರಾಬಾದ್ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ, ಇಲ್ಲಿನ ಕಲೆ, ಸಂಸ್ಕೃತಿ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳು, ಇಲ್ಲಿನ ಪ್ರತಿಭೆಗಳು, ಸಾಧಕರು ಮುಂತಾದ ಸಂಗತಿಗಳನ್ನು ಪರಿಚಯಿಸುವ ಈಶಾನ್ಯದ ಐಸಿರಿ ಸರಣಿಯ ೧೪ ನೇ ಸಂಚಿಕೆ ಡಿ. ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಹೊಸಪೇಟೆ, ರಾಯಚೂರು ಹಾಗೂ ಕಲಬುರಗಿ ಆಕಾಶವಾಣಿ ಕೇಂದ್ರಗಳಿಂದ ಏಕಕಾಲಕ್ಕೆ ಪ್ರಸಾರವಾಗಲಿದೆ.
        ಹೈ.ಕ.ಪ್ರದೇಶ ಅಭಿವೃದ್ಧಿ ಮಂಡಳಿ ಈ ಸಂಪೂರ್ಣ ಸರಣಿಯನ್ನು ಪ್ರಾಯೋಜಿಸಿದ್ದು, ೧೪ನೇ ಸಂಚಿಕೆಯಲ್ಲಿ ಮೂಡಿ ಬರಲಿರುವ ಕಾರ್ಯಕ್ರಮದ ವಿವರಗಳು ಹೀಗಿವೆ.  ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃಧ್ಧಿ ಮಂಡಳಿಯ ಸ್ಥಾಪನೆಯ, ಉದ್ದೇಶ ಹಾಗೂ ಪ್ರಗತಿಗಳ ಪರಿಚಯ. ನಿವೃತ್ತ ನ್ಯಾಯ ಮೂರ್ತಿಗಳಾಗಿರುವ ಎಂ.ಬಿ. ಬಿರಾದರ ಅವರಿಂದ ಆಸ್ತಿಯ ಹಕ್ಕಿನ ಬಗ್ಗೆ ಹೆಚ್ಚಿನ ಮಾಹಿತಿ.  ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾಗಿರುವ ಎನ್.ಬಿ. ಪಾಟೀಲ ಅವರಿಂದ ವ್ಯಕ್ತಿತ್ವ ವಿಕಸನ ಕುರಿತು ಸಲಹೆ ಸೂಚನೆಗಳು.  ಕಲಬುರಗಿ ತಾಲೂಕಿನ ಯಳವಂತಗಿ ಬಿ. ಗ್ರಾಮದ ಸವಿತಾ ಸ್ವ ಸಹಾಯ ಸಂಘವು ಕ್ರಮಿಸಿದ ಸ್ವಾವಲಂಬನೆಯ ಹಾದಿ.  ಕಲಬುರಗಿಯ ಸಿದ್ರಾಮಪ್ಪ ಪೋಲೀಸ ಪಾಟೀಲ ಹಾಗೂ ಸದಸ್ಯರಿಂದ ತತ್ವಪದಗಳು.  ಇವುಗಳ ಜೊತೆಗೆ. ಕಳೆದ ವಾರದಲ್ಲಿ ಈ ಭಾಗದ ಆರು ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್‍ಯಕ್ರಮಗಳು, ಘಟಿಸಿದ ಪ್ರಮುಖ ಸಂಗತಿಗಳನ್ನು ಒಳಗೊಂಡ 'ವಾರದ ವರದಿ', ಸಾಮಾಜಿಕ ವಿಷಯಗಳ ಕುರಿತು ಜಿಂಗಲ್, ನುಡಿಮುತ್ತು , ನಗೆಹನಿ ಮೂಡಿ ಬರಲಿವೆ.  ಸರಣಿಯ ನಿರೂಪಣಾ ಸಾಹಿತ್ಯ ಹಾಗೂ ನಿರ್ಮಾಣದ ಜವಾಬ್ದಾರಿಯನ್ನು ಶ್ರೀs ಸೋಮಶೇಖರ ಎಸ್. ರುಳಿಯವರು ವಹಿಸಿಕೊಂಡಿದ್ದಾರೆ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ತಿಳಿಸಿದ್ದಾರೆ.

Advertisement

0 comments:

Post a Comment

 
Top