PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ೧- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಕೊಪ್ಪಳ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ, ಕೊಪ್ಪಳ ಮತ್ತು ಜಿಲ್ಲೆ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ದಿ. ೩ ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಜರುಗಲಿದೆ.
    ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಶ್ರೀಮತಿ ಕೆ. ನಾಗರತ್ನ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಶ್ರೀಮತಿ ಎಂ. ಕನಗವಲ್ಲಿ ವಹಿಸಲಿದ್ದಾರೆ.
    ಅತಿಥಿಗಳಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ. ಖ. ಉದುಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ ಜಿ.ಎಲ್., ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ ಶಿರಹಟ್ಟಿ, ಹಿರಿಯ ಸಿವಿಲ್ ಜಡ್ಜ್ ನ್ಯಾಯಾಧೀಶ ಬಿ. ಧಶರಥ, ಸಾರ್ವನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಶ್ಯಾಂಸುಂದರ, ನಗರಸಭೆ ಪೌರಯುಕ್ತ ರಮೇಶ ಪಟ್ಟೇದಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ವ್ಹಿ. ತುಕಾರಾಮ್‌ರಾವ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಬಿ. ಪಾನಘಂಟಿ, ವಕೀಲ ಆಸೀಫ್‌ಅಲಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|| ಲೋಕೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ಮತ್ತಿರರು ಆಗಮಿಸಲಿದ್ದಾರೆ.
    ಮಧ್ಯಾಹ್ನ ೩-೩೦ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.     ಈ ಕಾರ್ಯಕ್ರಮದಲ್ಲಿ ಕ್ರೀಡಾಕೂಟ ನಡೆಯಲಿವೆ. ದಿನಾಂಕ ೦೩-೧೨-೨೦೧೫ ಬೆಳಿಗ್ಗೆ ೧೦ ಗಂಟೆಗೆ ಸ್ಥಳ ಜಿಲ್ಲಾ ಪೊಲೀಸ್ ಕ್ರೀಡಾಂಗಣ ಕೊಪ್ಪಳ ಆಸಕ್ತರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ  ಶಿದ್ಲಿಂಗಯ್ಯ ಗೊರ್ಲೆಕೊಪ್ಪ.

Advertisement

0 comments:

Post a Comment

 
Top