ಕೊಪ್ಪಳ ಡಿ. ೨೩ (ಕ ವಾ) ರಾಯಚೂರು-ಕೊಪ್ಪಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ವಿಧಾನಪರಿಷತ್ ಚುನಾವಣೆ ನಿಮಿತ್ಯ ಡಿ. ೨೭ ರಂದು ಮತದಾನ ನಡೆಯಲಿದ್ದು, ಮತಗಟ್ಟೆ ಮತ್ತು ಮತದಾನ ಕೇಂದ್ರದೊಳಗೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ಮತದಾರರು ಮತಗಟ್ಟೆ ಪ್ರದೇಶ ಮತ್ತು ಮತದಾನ ನಡೆಯುವ ಕೋಣೆ ಒಳಗಡೆ ಮೊಬೈಲ್, ಕ್ಯಾಮೆರಾ ಅಥವಾ ಇನ್ಯಾವುದೇ ಬಗೆಯ ಎಲೆಕ್ಟ್ರಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಮತದಾನವನ್ನು ಮುಕ್ತ, ಶಾಂತ ಹಾಗೂ ನಿಸ್ಪಕ್ಷಪಾತವಾಗಿ ನಡೆಯುವುದರ ಬಗ್ಗೆ ನಿಗಾ ವಹಿಸಲು ಎಲ್ಲ ಮತಗಟ್ಟೆಗಳಿಗೆ ಜಿಲ್ಲಾ ಆಡಳಿತದ ವತಿಯಿಂದ ಮೈಕ್ರೋ ಅಬ್ಸರ್ವರ್‌ಗಳನ್ನು ನೇಮಿಸಲಾಗಿದೆ. ಅಲ್ಲದೆ ಮತದಾನ ಕೇಂದ್ರದಲ್ಲಿ ನಿಗಾ ವಹಿಸಲು ಎಲ್ಲ ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಯಾವುದೇ ವ್ಯಕ್ತಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಕಲಿ ಮತದಾನ ಮಾಡಲು ಪ್ರಯತ್ನಿಸಿದಲ್ಲಿ ಅಥವಾ ಪ್ರೇರೇಪಿಸಿದಲ್ಲಿ, ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.

0 comments:
Post a Comment