ಕೊಪ್ಪಳ, ಡಿ.೦೩
(ಕ ವಾ) ಅಂಗವೈಕಲ್ಯ ಕೇವಲ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬಂತೆ
ವಿಕಲಚೇತನರು ಕೂಡಾ ಎಲ್ಲ ರಂಗದಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ
ಹೊಂದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಿ.
ವಸಂತಪ್ರೇಮಾ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾ
ಡಿ.೦೩ ರಂದು ವಿಶ್ವದಾದ್ಯಂತ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಜಿಲ್ಲಾ ಮಟ್ಟದ ಈ ಕಾರ್ಯಕ್ರಮದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಉತ್ಸಾಹದಿಂದ ಭಾಗವಹಿಸಿರುವುದು ಸಂತಸ ಮೂಡಿಸಿದೆ. ಅಂಗವೈಕಲ್ಯ ಕೇವಲ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬಂತೆ ವಿಕಲಚೇತನರು ಕೂಡಾ ಎಲ್ಲ ರಂಗದಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರು ಸಮಾಜದಲ್ಲಿ ಗೌರವಯುತವಾಗಿ ಬದುಕಲು ನಾವೆಲ್ಲರೂ ಸಹಕರಿಸಬೇಕಿದೆ. ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಇಂತಹ ಯೋಜನೆಗಳನ್ನು ವಿಕಲಚೇತನರು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಿ.ವಸಂತಪ್ರೇಮಾ ಅವರು ಕರೆ ನೀಡಿದರು.
ಕಾಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ ಅವರು ಮಾತನಾಡಿ, ಮನಷ್ಯ ಕ್ರೀಡೆಗಳಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಜೀವನದಲ್ಲಿ ಸ್ಥಿರತೆ ಕಾಯ್ದುಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ವಿಕಲಚೇತನರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನವರೆಗೆ ೯೯೬೩ ದೈಹಿಕ ಅಂಗವಿಕಲರು, ೫೭೪೯ ಜನ ದೃಷ್ಠಿದೋಷ ಹೊಂದಿರುವ ಅಂಗವಿಕಲರು, ೨೩೫೧ ಜನ ಬುದ್ಧಿಮಾಂದ್ಯ ಅಂಗವಿಕಲರು ಹಾಗೂ ಇತರೆ ಅಂಗವಿಕಲರು ಸೇರಿದಂತೆ ಒಟ್ಟು ೩೪,೫೪೯ ಜನ ವಿಕಲಚೇತನರನ್ನು ಗುರುತಿಸಲಾಗಿದೆ. ಸೌಲಭ್ಯ ವಂಚಿತ ವಿಕಲಚೇತನರನ್ನು ಗುರುತಿಸುವ ಕೆಲಸ ಇಲಾಖೆಯಿಂದ ಸದಾ ಪ್ರಗತಿಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಇಲಾಖೆ ವತಿಯಿಂದ ೨೪೪ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ೯ ಜನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತ್ತೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮೂಹ ಸಾಮರ್ಥ್ಯ ಸಂಸ್ಥೆಯ ಎಸ್.ಎನ್.ಬಸಪ್ಪ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಅರಿಶಿನಕೇರಿ ನಾಗರಾಜ್ ಅವರಿಗೆ ಈ ವರ್ಷ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಸಂತಸ ಮೂಡಿಸಿದೆ. ಬುದ್ಧಿ ಮಾಂದ್ಯ ಮಕ್ಕಳಿಗೆ ಇಲ್ಲಿಯವರೆಗೂ ಭರಿಸಲಾದ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ೪೯೦ ಜನ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ಬುದ್ಧಿ ಮಾಂದ್ಯ ಮಕ್ಕಳ ಪೋಷಕರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳದ ಕುಷ್ಟಗಿ ರಸ್ತೆಯಲ್ಲಿರುವ ಸಮೂಹ ಸಾಮರ್ಥ್ಯ ಕಛೇರಿಗೆ ಭೇಟಿ ನೀಡುವಂತೆ ಅವರು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ||ಶಾರದಾ ನಿಂಬರಗಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದಾರ್, ಜಿಲ್ಲಾ ವಿಕಲಚೇತನರ ಒಕ್ಕೂಟದ ಗೌರವಾಧ್ಯಕ್ಷ ಪ್ರತಾಪ ನವಲಿಹಿರೇಮಠ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ದಕ್ಷಿಣ ಭಾರತ ವಿಕಲಚೇತನರ ಸಂಘದ ಸದಸ್ಯ ವಿರುಪಾಕ್ಷಪ್ಪ ತಳಕಲ್, ಸರ್ಕಾರಿ ನೌಕರ ವಿಕಲಚೇತನರ ಸಂಘದ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ, ಅಂಗವಿಕಲರ ಒಕ್ಕೂಟದ ಕೊಪ್ಪಳ ತಾಲೂಕಾ ಅಧ್ಯಕ್ಷ ಮಲ್ಲಯ್ಯ ಹಲಸಿನಮಠ, ಕುಷ್ಟಗಿ ತಾಲೂಕಾಧ್ಯಕ್ಷ ಚಂದ್ರಶೇಖರ ಕಂಬಾರ, ಯಲಬುರ್ಗಾ ತಾಲೂಕಾಧ್ಯಕ್ಷ ಕಳಕಪ್ಪ ಹೂಗರ, ಅಳವಂಡಿಯ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಗೊರ್ಲೆಕೊಪ್ಪ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಶಿವಯೋಗಪ್ಪ ಬಳ್ಳೊಳ್ಳಿ ಎಂ.ಆರ್.ಡಬ್ಲ್ಯೂ ಮತ್ತು ವಿ.ಆರ್.ಡಬ್ಲ್ಯೂ ನ ಅಧ್ಯಕ್ಷ ಆದಪ್ಪ ಮಾಲಿಪಾಟೀಲ್, ಎ.ಐ.ಡಿ ಸಂಸ್ಥೆಯ ಕೆ.ರಾಮಪ್ಪ ಸೇರಿದಂತೆ ಜಿಲ್ಲೆಯ ವಿವಿಧ ವಿಕಲಚೇತನರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ವಿಕಲಚೇತನರ ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.
ಜ್ಯ ವಿಕಲಚೇತನರ ಒಕ್ಕೂಟ ಮತ್ತು
ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ
ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಕಲಚೇತನರ ಕ್ರೀಡಾಕೂಟದ
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾ
ಡಿ.೦೩ ರಂದು ವಿಶ್ವದಾದ್ಯಂತ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಜಿಲ್ಲಾ ಮಟ್ಟದ ಈ ಕಾರ್ಯಕ್ರಮದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಉತ್ಸಾಹದಿಂದ ಭಾಗವಹಿಸಿರುವುದು ಸಂತಸ ಮೂಡಿಸಿದೆ. ಅಂಗವೈಕಲ್ಯ ಕೇವಲ ದೇಹಕ್ಕೆ ಹೊರತು ಮನಸ್ಸಿಗಲ್ಲ ಎಂಬಂತೆ ವಿಕಲಚೇತನರು ಕೂಡಾ ಎಲ್ಲ ರಂಗದಲ್ಲಿಯೂ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರು ಸಮಾಜದಲ್ಲಿ ಗೌರವಯುತವಾಗಿ ಬದುಕಲು ನಾವೆಲ್ಲರೂ ಸಹಕರಿಸಬೇಕಿದೆ. ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಇಂತಹ ಯೋಜನೆಗಳನ್ನು ವಿಕಲಚೇತನರು ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಯತ್ನ ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಿ.ವಸಂತಪ್ರೇಮಾ ಅವರು ಕರೆ ನೀಡಿದರು.
ಕಾಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ ಅವರು ಮಾತನಾಡಿ, ಮನಷ್ಯ ಕ್ರೀಡೆಗಳಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಜೀವನದಲ್ಲಿ ಸ್ಥಿರತೆ ಕಾಯ್ದುಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ವಿಕಲಚೇತನರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನವರೆಗೆ ೯೯೬೩ ದೈಹಿಕ ಅಂಗವಿಕಲರು, ೫೭೪೯ ಜನ ದೃಷ್ಠಿದೋಷ ಹೊಂದಿರುವ ಅಂಗವಿಕಲರು, ೨೩೫೧ ಜನ ಬುದ್ಧಿಮಾಂದ್ಯ ಅಂಗವಿಕಲರು ಹಾಗೂ ಇತರೆ ಅಂಗವಿಕಲರು ಸೇರಿದಂತೆ ಒಟ್ಟು ೩೪,೫೪೯ ಜನ ವಿಕಲಚೇತನರನ್ನು ಗುರುತಿಸಲಾಗಿದೆ. ಸೌಲಭ್ಯ ವಂಚಿತ ವಿಕಲಚೇತನರನ್ನು ಗುರುತಿಸುವ ಕೆಲಸ ಇಲಾಖೆಯಿಂದ ಸದಾ ಪ್ರಗತಿಯಲ್ಲಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಇಲಾಖೆ ವತಿಯಿಂದ ೨೪೪ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ೯ ಜನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತ್ತೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮೂಹ ಸಾಮರ್ಥ್ಯ ಸಂಸ್ಥೆಯ ಎಸ್.ಎನ್.ಬಸಪ್ಪ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ ಅರಿಶಿನಕೇರಿ ನಾಗರಾಜ್ ಅವರಿಗೆ ಈ ವರ್ಷ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ಸಂತಸ ಮೂಡಿಸಿದೆ. ಬುದ್ಧಿ ಮಾಂದ್ಯ ಮಕ್ಕಳಿಗೆ ಇಲ್ಲಿಯವರೆಗೂ ಭರಿಸಲಾದ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಈಗಾಗಲೇ ೪೯೦ ಜನ ಫಲಾನುಭವಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ಬುದ್ಧಿ ಮಾಂದ್ಯ ಮಕ್ಕಳ ಪೋಷಕರು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳದ ಕುಷ್ಟಗಿ ರಸ್ತೆಯಲ್ಲಿರುವ ಸಮೂಹ ಸಾಮರ್ಥ್ಯ ಕಛೇರಿಗೆ ಭೇಟಿ ನೀಡುವಂತೆ ಅವರು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ||ಶಾರದಾ ನಿಂಬರಗಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದಾರ್, ಜಿಲ್ಲಾ ವಿಕಲಚೇತನರ ಒಕ್ಕೂಟದ ಗೌರವಾಧ್ಯಕ್ಷ ಪ್ರತಾಪ ನವಲಿಹಿರೇಮಠ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ್, ದಕ್ಷಿಣ ಭಾರತ ವಿಕಲಚೇತನರ ಸಂಘದ ಸದಸ್ಯ ವಿರುಪಾಕ್ಷಪ್ಪ ತಳಕಲ್, ಸರ್ಕಾರಿ ನೌಕರ ವಿಕಲಚೇತನರ ಸಂಘದ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ, ಅಂಗವಿಕಲರ ಒಕ್ಕೂಟದ ಕೊಪ್ಪಳ ತಾಲೂಕಾ ಅಧ್ಯಕ್ಷ ಮಲ್ಲಯ್ಯ ಹಲಸಿನಮಠ, ಕುಷ್ಟಗಿ ತಾಲೂಕಾಧ್ಯಕ್ಷ ಚಂದ್ರಶೇಖರ ಕಂಬಾರ, ಯಲಬುರ್ಗಾ ತಾಲೂಕಾಧ್ಯಕ್ಷ ಕಳಕಪ್ಪ ಹೂಗರ, ಅಳವಂಡಿಯ ಕಾರ್ಗಿಲ್ ಮಲ್ಲಯ್ಯ ವಿಕಲಚೇತನರ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಗೊರ್ಲೆಕೊಪ್ಪ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಶಿವಯೋಗಪ್ಪ ಬಳ್ಳೊಳ್ಳಿ ಎಂ.ಆರ್.ಡಬ್ಲ್ಯೂ ಮತ್ತು ವಿ.ಆರ್.ಡಬ್ಲ್ಯೂ ನ ಅಧ್ಯಕ್ಷ ಆದಪ್ಪ ಮಾಲಿಪಾಟೀಲ್, ಎ.ಐ.ಡಿ ಸಂಸ್ಥೆಯ ಕೆ.ರಾಮಪ್ಪ ಸೇರಿದಂತೆ ಜಿಲ್ಲೆಯ ವಿವಿಧ ವಿಕಲಚೇತನರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ವಿಕಲಚೇತನರ ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.
0 comments:
Post a Comment