PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಡಿ.೦೩ (ಕರ್ನಾಟಕ ವಾರ್ತೆ) ಕೊಪ್ಪಳ ಜಿಲ್ಲೆಯನ್ನು ಸರ್ಕಾರ ಬರ ಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಿರುವ ಪ್ರಯುಕ್ತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ೧೦೦ ದಿನಗಳ ಉದ್ಯೋಗವನ್ನು ಪೂರೈಸಿರುವ ಜಿಲ್ಲೆಯ ಕುಟುಂಬಗಳಿಗೆ ಹೆಚ್ಚುವರಿಯಾಗಿ ೫೦ ದಿನಗಳ ಉದ್ಯೋಗ ಒದಗಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.
     ಯೋಜನೆಯಡಿ ೧೦೦ ದಿನಗಳನ್ನು ಪೂರೈಸಿರುವ ಗ್ರಾಮೀಣ ಕುಟುಂಬಗಳಿಗೆ ಹೆಚ್ಚುವರಿ ಮಾನವ ದಿನಗಳನ್ನು ಸೃಜನೆ ಮಾಡಿ, ಹೆಚ್ಚುವರಿಯಾದ ೫೦ ಉದ್ಯೋಗ ದಿನಗಳನ್ನು ಒದಗಿಸಲು ಹಾಗೂ ನರೇಗಾ ತಂತ್ರಾಂಶದ
ಲ್ಲಿ ಹೆಚ್ಚುವರಿಯಾಗಿ ಕೆಲಸ ಮಾಡಿರುವ ವಿವರಗಳ ದತ್ತಾಂಶಗಳನ್ನು ನಮೂದಿಸಲು ಕೇಂದ್ರ ಸರ್ಕಾರವು ಅವಕಾಶ ಕಲ್ಪಿಸಿದೆ.  ಈ ಹಿನ್ನೆಲೆಯಲ್ಲಿ ಯೋಜನೆಯಡಿ ಜಿಲ್ಲೆಯ ಪ್ರತಿ ಗ್ರಾಮೀಣ ಕುಟುಂಬಗಳಿಗೆ ೧೦೦ ರಿಂದ ೧೫೦ ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಹಳ್ಳಿಗರು ಬೇರೆ ರಾಜ್ಯ ಮತ್ತು ಜಿಲ್ಲೆಗಳಿಗೆ ಗುಳೇ ಹೋಗದೇ, ಯೋಜನೆಯಡಿ ಕೈಗೊಳ್ಳಲಾಗಿರುವ  ಸಮುದಾಯ ಕಾಮಗಾರಿಗಳಲ್ಲಿ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಿ, ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.  ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿ ಕಛೇರಿಯ ಸಹಾಯವಾಣಿ ಸಂಖ್ಯೆ : ೦೮೫೩೯-೨೨೦೧೭೪ ನ್ನು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ದೂರವಾಣಿ ಸಂಖ್ಯೆ : ೯೪೮೦೮೭೧೦೦೦ ಗೆ ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.  

Advertisement

0 comments:

Post a Comment

 
Top