PLEASE LOGIN TO KANNADANET.COM FOR REGULAR NEWS-UPDATES

ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಈ ಕಾರಣಕ್ಕೆ ಹಾಲಿನ ಬೆಲೆ ಹೆಚ್ಚಳಕ್ಕೆ ಪ್ರಸ್ತಾಪ ಬಂದಿದೆ ಎಂದು ಪಶು ಸಂಗೋಪನಾ ಸಚಿವರು ಹೇಳಿದ್ದಾರೆ. ಕರ್ನಾಟಕದಲ್ಲಿ ಬೇಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ಹಾಲಿನ ಉತ್ಪಾದನೆಯಾಗುತ್ತಿದೆ. ಬಹಳಷ್ಟು ಹಾಲು ಹೆಚ್ಚುವರಿಯಾಗಿ ಉಳಿಯುತ್ತಿದೆ. ಬೇರೆ ರಾಜ್ಯಗಳಲ್ಲಿ ಮಾರುಕಟ್ಟೆ ಕಂಡುಕೊಳ್ಳಲು ಕೆಎಂಎಫ್ ಹರಸಾಹಸ ಮಾಡುತ್ತಿದೆ. ಈ ಹೆಚ್ಚವರಿಯಾಗಿ ಉಳಿಯುವ ಹಾಲು ಕೆಎಂಎಫ್ ಸಂಸ್ಥೆಯ ಲಾಭವನ್ನು ತಗ್ಗಿಸುತ್ತಿದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ. ಹಾಲಿನ ಬೆಲೆ ಏರಿಕೆಯ ಪ್ರಸ್ತಾಪಕ್ಕೆ ಇದೂ ಒಂದು ಕಾರಣವಿರಬಹುದು ಎಂದು ಶಂಕಿಸಲಾಗಿದೆ.

Advertisement

0 comments:

Post a Comment

 
Top