PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜ.೦೫ (ಕ ವಾ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಹಯೋಗದೊಂದಿಗೆ 'ದಂತ ಭಾಗ್ಯ' ಯೋಜನೆಯಡಿ ಹಿರಿಯ ನಾಗರಿಕರಿಗೆ ವಿಶೇಷ ಉಚಿತ ದಂತ ತಪಾಸಣಾ ಶಿಬಿರವನ್ನು ಜ.೦೮ ರಂದು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದೆ.
     ಸರ್ಕಾರವು ದೇಶದಲ್ಲಿಯೇ ಪ್ರಥಮವಾಗಿ, ಬಡತನ ರೇಖೆಗಿಂತ ಕೆಳಗಿರುವ ಸಂಪೂರ್ಣ ದಂತಗಳನ್ನು ಕಳೆದುಕೊಂಡಿರುವ ರಾಜ್ಯದ ೬೦ ವರ್ಷ ಮೇಲ್ಪಟ್ಟ ಬಿಪಿಎಲ್ ವರ್ಗಕ್ಕೆ ಸೇರಿದ ಹಿರಿಯ ನಾಗರಿಕರಿಗೆ ಉಚಿತವಾಗಿ ದಂತ ಪಂಕ್ತಿಗಳನ್ನು ನೀಡುವ ಸಲುವಾಗಿ ದಂತಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಸರ್ಕಾರಿ ವಲಯದ ಆಸ್ಪತ್ರೆಗಳಲ್ಲಿ ದಂತ ವೈದ್ಯರು ಕಡಿಮೆ ಸಂಖ್ಯೆಯಲ್ಲಿರುವುದರಿಂದ ಖಾಸಗಿ ದಂತ ವೈದ್ಯ ಕಾಲೇಜುಗಳ ಸಹಕಾರದೊಂದಿಗೆ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ.
     ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ಹಿರಿಯ ನಾಗರಿಕರು ತಮ್ಮ ಬಿಪಿಎಲ್ ಪಡಿತರ ಚೀಟಿಯೊಂದಿಗೆ ಜ.೦೮ ರಂದು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿರುವ ಉಚಿತ ದಂತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀಕಾಂತ ಬಾಸೂರು ಅವರು ತಿಳಿಸಿದ್ದಾರೆ. 

Advertisement

0 comments:

Post a Comment

 
Top