ಕೊಪ್ಪಳ, ಜ. ೧೪ (ಕ ವಾ) ಕೊಪ್ಪಳದಲ್ಲಿ ಜ. ೨೬ ರಿಂದ ಜರುಗಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರು.
ಗವಿಸಿದ್ದೇಶ್ವರ ಜಾತ್ರೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ದಂದು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳದಲ್ಲಿ ಪ್ರತಿ ವರ್ಷ ನಡೆಯುವ ಗವಿಸಿದ್ದೇಶ್ವರ ಜಾತ್ರೆ ಇಡೀ ರಾಜ್ಯಕ್ಕೆ ಸಂಭ್ರಮ ತರುವಂತಾಗಬೇಕು ಅಲ್ಲದೆ ಧಾರ್ಮಿಕ ಉತ್ಸವವಾಗಬೇಕು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು ೩ ರಿಂದ ೫ ಲಕ್ಷ ಭಕ್ತಾದಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಜ. ೨೬ ರಂದು ಮಹಾರಥೋತ್ಸವ ನಡೆಯಲಿದ್ದು, ಜಾತ್ರೆ ಶಾಂತಿಯುತವಾಗಿ ಹಾಗೂ ಸುಗಮವಾಗಿ ಜರುಗುವಂತೆ ಜಿಲ್ಲಾಡಳಿತದಿಂದ ಸಕಲ ರೀತಿಯ ಸಹಕಾರ ನೀಡಲಾಗುವುದು. ರಥೋತ್ಸವದ ದಿನದಂದು ಟ್ರಾಫಿಕ್ ಜಾಮ್ ಆಗದಂತೆ ಎಚ್ಚರ ವಹಿಸಲು ಈಗಾಗಲೆ ಪೊಲೀಸ್ ಇಲಾಖೆ ಯೋಜನೆಯನ್ನು ರೂಪಿಸಿದೆ ಎಂದರು.
ಸ್ವಚ್ಛತೆಗೆ ಆದ್ಯತೆ : ಗವಿಸಿದ್ದೇಶ್ವರ ಜಾತ್ರೆಯ ಸಂದರ್ಭದಲ್ಲಿ ನಗರದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಸಾರ್ವಜನಿಕರಿಗೆ ಕುಡಿಯುವ ನೀರು ಸಮರ್ಪಕವಾಗಿ ದೊರೆಯಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗದಂತೆ ಎಚ್ಚರಿಕೆ ವಹಿಸಬೇಕು. ತುರ್ತು ಆರೋಗ್ಯ ಸೇವೆ, ಮುಂಜಾಗ್ರತೆಯ ಕ್ರಮವಾಗಿ ಗವಿಮಠದ ಬಳಿ ಅಗ್ನಿಶಾಮಕ ವಾಹನವನ್ನು ಸಿದ್ಧವಾಗಿರಿಸಿಕೊಳ್ಳಬೇಕು. ಜಾತ್ರೆಯ ಅಂಗವಾಗಿ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೃದ್ಧರು ಅಂಗವಿಕಲರಿಗೆ ಸಾರಿಗೆ ಸೌಲಭ್ಯ : ಜಾತ್ರೆಯ ದಿನದಂದು ಜಾತ್ರಾ ಆವರಣ ಬಳಿ ಯಾವುದೇ ವಾಹನಗಳು ತೆರಳದಂತೆ ಬಿಗಿ ಕ್ರಮ ಕೈಗೊಳ್ಳಲಾಗುವುದು. ಆದರೆ ವೃದ್ಧರು ಮತ್ತು ಅಂಗವೈಕಲ್ಯ ಹೊಂದಿರುವ ಭಕ್ತಾದಿಗಳಿಗೆ ಮಾತ್ರ ಜಾತ್ರಾ ಆವರಣಕ್ಕೆ ಹೋಗಲು ೨೦ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಇಂತಹ ವಾಹನಗಳ ಗುರುತಿಗೆ ವ್ಯವಸ್ಥೆ ಕೈಗೊಳ್ಳುವಂತೆ ಗವಿಮಠದ ಪ್ರತಿನಿಧಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಅವರು ತಿಳಿಸಿದರು.
ಪೊಲೀಸ್ ಬಂದೋಬಸ್ತ್ : ಸಭೆಯಲ್ಲಿ ಉಪಸ್ಥಿತರಿದ್ದ ಡಿವೈಎಸ್‌ಪಿ ಶ್ರೀಕಾಂತ್ ಕಟ್ಟಿಮನಿ ಅವರು ಮಾತನಾಡಿ, ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ವಿವಿಧ ಜಿಲ್ಲೆಗಳಿಂದ ಕ್ರೈಂ ಸ್ಕ್ವಾಡ್‌ಗಳನ್ನು ಕರೆಸಲಾಗುವುದು. ದ್ವಿಚಕ್ರ ವಾಹನ, ಟ್ರ್ಯಾಕ್ಟರ್, ಲಾರಿ, ಜೀಪ್, ಕಾರು ಮುಂತಾದ ವಾಹನಗಳ ಪಾರ್ಕಿಂಗ್ ಮಾಡಲು ಈಗಾಗಲೆ ಸ್ಥಳಗಳನ್ನು ಗುರುತಿಸಲಾಗಿದೆ. ಜಾತ್ರೆ ಸಂದರ್ಭದಲ್ಲಿ ಜೇಬುಗಳ್ಳತನ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಜಾತ್ರೆ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಧೆಡೆಗಳಲ್ಲಿ ಸಿ.ಸಿ. ಟಿ.ವಿ. ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ. ಟ್ರಾಫಿಕ್ ಜಾಮ್ ತಡೆಗಟ್ಟಲು ವಾಹನ ಸಂಚಾರ ಮಾರ್ಗಗಳ ಬದಲಾವಣೆ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಉಪವಿಭಾಗಾಧಿಕಾರಿ ಐ.ಎಸ್. ಶಿರಹಟ್ಟಿ, ನಗರಸಭೆ ಉಪಾಧ್ಯಕ್ಷ ಬಾಳಪ್ಪ ಬಾರಕೇರ, ನಗರ ಪೊಲೀಸ್ ಠಾಣೆಯ ಸತೀಶ್ ಪಾಟೀಲ್, ಪೌರಾಯುಕ್ತ ರಮೇಶ್ ಪಟ್ಟೇದಾರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಲಷ್ಕರಿನಾಯಕ್, ಗವಿಮಠದ ಶರಣು ಮುಂತಾದವರು ಭಾಗವಹಿಸಿದ್ದರು.

0 comments:
Post a Comment
Click to see the code!
To insert emoticon you must added at least one space before the code.