PLEASE LOGIN TO KANNADANET.COM FOR REGULAR NEWS-UPDATES

ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಜೀವವನ್ನೇ ಮುಡುಪಾಗಿಟ್ಟ ಸುಭಾಷ್ ಚಂದ್ರ ಬೋಸ್ ಜನುಮದಿನ ಇಂದು.. ಭಾರತಮಾತೆಯ ವೀರ ಪುತ್ರ ನೇತಾಜಿಗೆ ಕೋಟಿ ಕೋಟಿ ನಮನ...
ನೇತಾಜಿ ಸುಭಾಸಚಂದ್ರ ಬೋಸ್ ಅವರು ಈ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ ಪುರುಷ. ಅಂತಹವರ ಜೀವನ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಸುಭಾಷ್‌ಚಂದ್ರ ಬೋಸ್ ಜನಿಸಿದ್ದು ೧೮೯೭ರ ಜನವರಿ ೨೩ರಂದು, ಒರಿಸ್ಸಾದ ಕಟಕ್‌ನಲ್ಲಿ. ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಆ ದಂಪತಿಗಳ ೯ ಮಕ್ಕಳಲ್ಲಿ ಸುಭಾಷ್ ೬ನೇ ಯವರು.ಕಟಕ್‌ನಲ್ಲಿ ರ‍್ಯಾವೆನ್‌ಶಾ ಕೊಲಿಜಿಯೇಟ್ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ, ಅಲ್ಲಿ ಮುಖ್ಯೋಪಾಧ್ಯಾಯ ಬೇಣಿಮಾಧವದಾಸ್‌ರ ರಿಂದ ಪ್ರೇರಣೆ, ಮುಂದೆ ವಿವೇಕಾನಂದರ ಸಾಹಿತ್ಯಗಳು, ಪತ್ರಗಳು ಮತ್ತು ’ಕೊಲೊಂಬೋದಿಂದಆಲ್ಮೋರಾಕ್ಕೆ’ ಉಪನ್ಯಾಸಗಳಿಂದ ಪ್ರಭಾವಿತರಾದ ಬೋಸರು ಅರವಿಂದರ ’ಆರ್ಯ’ ಮಾಸಪತ್ರಿಕೆಯ ತಪ್ಪದ ಓದುಗ!
೧೯೧೯ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿ.ಎ. ಪದವಿ, ನಂತರ ೧೯೧೯ರ ಸೆಪ್ಟೆಂಬರ್ ೧೫ರಂದು ಐ.ಸಿ.ಎಸ್ ಪರೀಕ್ಷೆಗಾಗಿ ಇಂಗ್ಲೆಂಡಿಗೆ ಪಯಣ. ೧೯೨೦ರ ಸೆಪ್ಟಂಬರ್‌ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪ್ರಾಪ್ತಿ.ವಿದೇಶೀ ನೌಕರಿ ಒಲ್ಲೆ ಎಂದು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನು ೧೯೨೧ರ ಎಪ್ರಿಲ್ ೨೨ರಂದು ಬ್ರಿಟಿಷ್ ಸರ್ಕಾರದ ಭಾರತ ವ್ಯವಹಾರ ಸಚಿವ ಎಡ್ವಿನ್ ಮಾಂಟೆಗುಗೆ ಪತ್ರವೊಂದನ್ನು ಬರೆದು ಮರಳಿಸಿದ್ದರು ಬೋಸ್!
೨೦ ತಿಂಗಳ ಇಂಗ್ಲೆಂಡ್ ವಾಸದ ನಂತರ ೧೯೨೧ರ ಜುಲೈ ೧೬ರಂದು ಮುಂಬಯಿಗೆ ಮರಳಿದರು ಬೋಸ್. ಅಂದೇ ಗಾಂಧೀಜಿ ಜತೆ ಮೊದಲ ಭೇಟಿ.೧೯೨೧ರ ಆಗಸ್ಟ್‌ನಿಂದ ಚಿತ್ತರಂಜನ್‌ದಾಸ್‌ರ ಮಾರ್ಗದರ್ಶನದಲ್ಲಿ ಯುವಕರ ಸಂಘಟನೆಗೆ ಆದ್ಯತೆ. ಚಳುವಳಿಯ ಸಂದರ್ಭವೊಂದರಲ್ಲಿ ಮ್ಯಾಜಿಸ್ಟ್ರೇಟರು ೬ ತಿಂಗಳ ಸಜೆ ಘೋಷಿಸಿದಾಗ ’ಬರಿಯ ೬ ತಿಂಗಳೇ? ನನ್ನದೇನು ಕೋಳಿಕದ್ದ ಅಪರಾಧವೇ?’ ಎಂದಿದ್ದರು ಬೋಸ್!
ಕಷ್ಟಪಟ್ಟುಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸ್‌ರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನ ಓಡಾಟ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ.
ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್‌ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ (ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ) ಸ್ಥಾಪನೆ; ಐಎನ್‌ಎಯ ಕಮಾಂಡರ್ ಇನ್ ಚೀಫ್ ಆಗಿ ಬೋಸ್. ೧೯೪೫ರ ಆಗಸ್ಟ್ ೧೮ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್‌ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನ.
ಆ ಕುರಿತು ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇದೆ. ಅನ್ವೇಷಣಾ ಸಮಿತಿ ನೇಮಿಸಿದರೂ, ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದಾರೆಂದೇ, ತಿಳಿದಿದ್ದರು. ಬೋಸರು ಆಗಾಗ ಹೇಳುತ್ತಿದ್ದರು "ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು"
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಸೇನೆಯನ್ನು ಅನುಸ್ಥಾಪಿಸಿದರು. ಇವರು ಟೈವಾನ್‍ನಲ್ಲಿ ೧೯೪೫ರ ಆಗಸ್ಟ್ ೧೮ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಭಾವಿಸಲಾಗಿದೆ. ಆದರೆ ಈ ಘಟನೆ ವಿವಾದಿತವಾಗಿದೆ.


Advertisement

0 comments:

Post a Comment

 
Top