ಕೊಪ್ಪಳ,
ಜ.೦೫ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್ ವಿಶೇಷ ಸಭೆಯನ್ನು ಜ.೦೭ ರಂದು
ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ
ಏರ್ಪಡಿಸಲಾಗಿದೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಕಚೇರಿ ತಿಳಿಸಿದೆ.

ಸನ್ಮಾನ ಕಾರ್ಯಕ್ರಮ ಮಂದೂಡಿಕೆ.
ಕೊಪ್ಪಳ, ಜ.೦೫ (ಕ ವಾ) ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಜ.೧೦ ರಂದು ಕುಷ್ಟಗಿಯ ಬಾಲಿಕೆಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ನಿವೃತ್ತ ನೌಕರರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಜ.೧೭ ಕ್ಕೆ ಮುಂದೂಡಲಾಗಿದೆ.
ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಮತ್ತು ಕಳೆದ ೨೦೧೫ರ ಮಾರ್ಚ್‌ನಲ್ಲಿ ನಡೆದ ೨ನೇ ಪಿ.ಯು.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜ.೧೦ ರಂದು ನಡೆಸಲು ಸಂಘದ ವತಿಯಿಂದ ದಿನಾಂಕ ನಿಗದಿಗೊಳಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು ಮುಂದೂಡಿ ಜ.೧೭ ರಂದು ಅದೇ ಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಎಲ್ಲ ಪ್ರಾಚಾರ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಎ.ಜಿ. ಶರಣಪ್ಪ ತಿಳಿಸಿದ್ದಾರೆ.

0 comments:
Post a Comment