ಕೊಪ್ಪಳ, ಜ.೧೧ (ಕ ವಾ) ಸ್ವಾಮಿ ವಿವೇಕಾನಂದರ ೧೫೩ ನೇ ಜನ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಜ. ೧೨ ರಿಂದ ೧೯ ರವರೆಗೆ ಯುವ ಸಪ್ತಾಹ ಆಚರಿಸಲಾಗುತ್ತಿದ್ದು, ಕಾರ್ಯಕ್ರಮದ ಉದ್ಘಾಟನೆ ಜ. ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಯುವ ಜನತೆಯ ಮೇಲೆ ಸ್ಪೂರ್ತಿಯ ನೆಲೆಯಾಗುವಂತೆ ಮಾಡುವ ಸದುದ್ದೇಶದಿಂದ ಈ ಬಾರಿ ಜಿಲ್ಲಾಡಳಿತದ ವತಿಯಿಂದ ಸ್ವಾಮಿ ವಿವೇಕಾನಂದರ ೧೫೩ ನೇ ಜನ್ಮ ದಿನಾಚರಣೆಯನ್ನು ಯುವ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ. ಇದರ ಉದ್ಘಾಟನೆ ಕಾರ್ಯಕ್ರಮ ಜ. ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment