ಕೊಪ್ಪಳ, ಜ.೦೨ (ಕ
ವಾ) ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೊಪ್ಪಳ ವಿಭಾಗದ ವತಿಯಿಂದ
ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‌ಗಳನ್ನು ಪಡೆದ ಫಲಾನುಭವಿಗಳು ೨೦೧೬ ರ ಫೆ.೨೮
ರೊಳಗಾಗಿ ತಮ್ಮ ಪಾಸ್‌ಗಳನ್ನು ನವೀಕರಿಸಿಕೊಳ್ಳುವಂತೆ ಸಂಸ್ಥೆಯ ವಿಭಾಗೀಯ
ನಿಯಂತ್ರಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳನ್ನು ನವೀಕರಿಸಿಕೊಳ್ಳಲು ಫಲಾನುಭವಿಗಳಿಗೆ ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ ೨೦೧೫ನೇ ಸಾಲಿನಲ್ಲಿ ವಿತರಿಸಲಾಗಿರುವ, ೨೦೧೫ರ ಡಿ.೩೧ ರವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್‌ಗಳನ್ನು ನವೀಕರಿಸದೇ, ೨೦೧೬ರ ಫೆ.೨೮ ರವರೆಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಕಲಚೇತನ ಫಲಾನುಭವಿಗಳು ೨೦೧೬ ರ ಜ.೦೧ ರಿಂದ ತಮ್ಮ ತಾಲೂಕಾ ಬಸ್ ನಿಲ್ದಾಣಗಳಲ್ಲಿ ೬೬೦ ರೂ. ಮೊತ್ತವನ್ನು ನಗದು ರೂಪದಲ್ಲಿ ಪಾವತಿಸಿ, ೨೦೧೬ನೇ ಸಾಲಿನ ಪಾಸ್‌ಗಳನ್ನು ನವೀಕರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

0 comments:
Post a Comment