ಕೊಪ್ಪಳ ಜ. ೨೦
(ಕ ವಾ) ಆಧ್ಯಾತ್ಮಿಕ ಕ್ಷೇತ್ರದ ಅಗ್ರಗಣ್ಯ ಚೇತನ ಸ್ವಾಮಿ ವಿವೇಕಾನಂದರ
ಜನ್ಮ ದಿನಾಚರಣೆ ನಿಮಿತ್ಯ ಆಯೋಜಿಸಲಾದ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ವಾರ್ತಾ
ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸ್ವಾಮಿ ವಿವೇಕಾನಂದರ ಕುರಿತು ಹೊರತಂದಿರುವ ಕಿರು
ಹೊತ್ತಿಗೆ ಹಾಗೂ ಮಡಿಕೆ ಪತ್ರವನ್ನು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ
ತಿಮ್ಮಾರೆಡ್ಡಿ ಮೇಟಿ ಅವರು ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳಿಗೆ ವಿತರಿಸುವ
ಕಾರ್ಯಕ್ಕೆ ಚಾಲನೆ ನೀಡಿದರು.
ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಆಚರಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ ಸ್ವಾಮಿ ವಿವೇಕಾನಂದರ ಕುರಿತು ಪ್ರಕಟಿಸಿರುವ ಕಿರುಹೊತ್ತಿಗೆ ಹಾಗೂ ಮಡಿಕೆ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ವಿವೇಕಾನಂದರ ಸಂದೇಶದ ಮಹತ್ವವನ್ನು ಅರಿತುಕೊಂಡು, ವಿದ್ಯಾರ್ಥಿಗಳು ಆತ್ಮ ವಿಶ್ವಾಸವನ್ನು ವೃದ್ಧಿಸಿಕೊಳ್ಳಬೇಕು. ಈ ಮೂಲಕ ತಮ್ಮ ಶೈಕ್ಷಣಿಕ ಬದುಕನ್ನು ಯಶಸ್ವಿಗೊಳಿಸಿ, ಭವ್ಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಟಿ. ಸೇರಿದಂತೆ ಹಲವು ಗಣ್ಯರು, ಕಾಲೇಜಿನ ಉಪನ್ಯಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತ ಕಿರುಹೊತ್ತಿಗೆ ಮತ್ತು ಮಡಿಕೆ ಪತ್ರಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

0 comments:
Post a Comment