ಕೊಪ್ಪಳ, ಜ.೧೧ (ಕ ವಾ) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೧೪-೧೫ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಸಣ್ಣ ರೈತರಿಗೆ ಸ್ಪ್ಲಿಂಕ್ಲರ್ ಸೆಟ್‌ಗಳನ್ನು ಒದಗಿಸಲು ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲು ಜ.೧೨ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದೆ.ಸಮಾಜ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ಸ್ಪ್ಲಿಂಕ್ಲರ್ ಸೆಟ್ ಒದಗಿಸಲು ಅನುದಾನ ಒದಗಿಸಲಾಗಿದ್ದು, ಇದಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತಗೊಂಡ ಫಲಾನುಭವಿಗಳ ಪೈಕಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೭ ಜನ ಪುರುಷರನ್ನು ಹಾಗೂ ೩ ಜನ ಮಹಿಳೆಯರನ್ನು ಸೇರಿದಂತೆ ಒಟ್ಟಾರೆ ಜಿಲ್ಲೆಗೆ ೫೦ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿ ಸಭೆಯನ್ನು ಜ.೧೨ ರಂದು ಬೆಳಿಗ್ಗೆ ೧೧.೩೦ ಗಂಟೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಅರ್ಜಿ ಸಲ್ಲಿಸಿದ ಆಸಕ್ತ ರೈತರು ಸಭೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ.ಕಲ್ಲೇಶ ಅವರು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment