PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜ. ೧೪ (ಕ ವಾ) ಕರ್ನಾಟಕ ಸರ್ಕಾರವು ಬರುವ ಏಪ್ರಿಲ್ ಮಾಹೆಯ ಒಳಗೆ ನಡೆಸಲಿರುವ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಪಿ.ಡಿ.ಒ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಒಟ್ಟು ೫೦ ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಸಕ್ತರು ಹೆಸರು ನೋಂದಾಯಿಸಿಕೊಳ್ಳುವಂತೆ ಸೂಚನೆ ನೀಡಿದೆ.
    ಆಸಕ್ತರು ದಿನಾಂಕ: ೧೯.೦೧.೨೦೧೬ರ ಒಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ' ದ ಕಛೇರಿಯಲ್ಲಿ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ೦೮೨೧-೨೫೧೫೯೪೪ ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿಯವರು ತಿಳಿಸಿದ್ದಾರೆ. 

Advertisement

0 comments:

Post a Comment

 
Top