PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜ.೦೫ (ಕ ವಾ) ಸರ್ಕಾರ ಹಾಗೂ ಯುನಿಸೆಫ್ ಜಂಟಿಯಾಗಿ ತಯಾರಿಸಿರುವ 'ಚಂದದ ಬದುಕು' ಕಿಶೋರಿಯರಿಗೆ ಜೀವನ ಕೌಶಲ್ಯ ಮಾಹಿತಿ ಕೈಪಿಡಿಯನ್ನು   ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಜನ-ಮನ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಬಿಡುಗಡೆಗೊಳಿಸಿದರು.
     ಯಾವುದೇ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಅಥವಾ ಹಳ್ಳಿ ಅಭಿವೃದ್ಧಿಯಾಗಬೇಕಾದರೆ ಆಯಾ ವ್ಯಾಪ್ತಿಯ ಹೆಣ್ಣು ಮಕ್ಕಳು ಅಭಿವೃದ್ಧಿಯಾಗಬೇಕು ಎಂದು ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೆ 'ಚಂದದ ಬದುಕು' ಕೈಪಿಡಿಯಲ್ಲಿ ಹದಿಹರೆಯದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ರಕ್ಷಣೆ ಇತ್ಯಾದಿಗಳು ಸಿಕ್ಕರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎನ್ನುವ ಪರಿಕಲ್ಪನೆಯೊಂದಿಗೆ ಕೊಪ್ಪಳ ಜಿಲ್ಲೆಯ ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ ರಚಿಸಲಾಗಿರುವ 'ಬಾಲಿಕಾ ಸಂಘ' (ಕಿಶೋರಿ ಸಂಘ) ಗಳ ಬಗ್ಗೆ, ಸಂಘದ ಸದಸ್ಯರ ಬಗ್ಗೆ, ಸದಸ್ಯರಿಗೆ ಜೀವನ ಕೌಶಲ್ಯ ತರಬೇತಿಯನ್ನು ಆಯೋಜಿಸಲಾಗಿರುವ ಬಗ್ಗೆ ಇತ್ಯಾದಿ ಹಲವಾರು ಅಂಶಗಳನ್ನು ಈಕೈಪಿಡಿಯಲ್ಲಿ ಉಲ್ಲೇಖಿಸಲಾಗಿದೆ. ಪೋಷಕರು ಮತ್ತು ಮಕ್ಕಳು ಕೈಪಿಡಿಯಲ್ಲಿ ಅಂಶಗಳನ್ನು ಅರಿತುಕೊಂಡು ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣಕ್ಕೆ ಒತ್ತು ನೀಡಲು ಕೈಪಿಡಿ ಸಹಕಾರಿಯಾಗಿದೆ.  ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ಯುನಿಸೆಫ್‌ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top