ಕೊಪ್ಪಳ, ಜ.೨೦ (ಕ ವಾ) ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮವನ್ನು ಜ.೨೧ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಬಸವರಾಜ ಪಾಟೀಲ್ ಇಟಗಿ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಂದುಸಾಬ್, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹೊಸಪೇಟೆ ವಿಜಯನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಎಸ್. ಶಿವಾನಂದ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ ೦೯ ಗಂಟೆಗೆ ನಗರದ ಶ್ರೀ ಸಿರಸಪ್ಪಯ್ಯನ ಮಠದಿಂದ ಜವಾಹರ ರಸ್ತೆಯ ಮೂಲಕ ಸಾಹಿತ್ಯ ಭವನದವರೆಗೆ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ಅವರು ತಿಳಿಸಿದ್ದಾರೆ.
ಬಿ.ಇಡಿ ಅಂತಿಮ ಆಯ್ಕೆ ಪಟ್ಟಿ ಪ್ರಕಟ: ಜ.೨೫ ರವರೆಗೆ ದಾಖಲಾತಿ.
ಕೊಪ್ಪಳ, ಜ.೨೦ (ಕ ವಾ) ಕೊಪ್ಪಳ ಜಿಲ್ಲೆ ಮುನಿರಾಬಾದ್ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಎರಡು ವರ್ಷದ ಬಿ.ಇಡಿ ಕೋರ್ಸಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಹಾಗೂ ದಾಖಲಾತಿಯು ಜ.೨೫ ರವರೆಗೆ ಜಿಲ್ಲಾ ಶಿಕ್ಷಣ ತರಬೆತಿ ಸಂಸ್ಥೆ(ಡಯಟ್), ಮುನಿರಾಬಾದ್ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮುನಿರಾಬಾದ್ನ ಪ್ರಾಚಾರ್ಯ ಬಿ.ಎಸ್. ಪರಮೇಶ್ ಅವರು ತಿಳಿಸಿದ್ದಾರೆ.

0 comments:
Post a Comment