PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜ.೦೭ (ಕ ವಾ) ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಯುವತಿಯರಿಗೆ ೩೦ ದಿನಗಳ ಉಚಿತ 'ಅಪಿಯರಲ್ ಡಿಸೈನಿಂಗ್ ಕೋರ್ಸ್' (ಟೇಲರಿಂಗ್) ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
     ಅರ್ಜಿ ಸಲ್ಲಿಸಲಿಚ್ಛಿಸುವವರು ಕೊಪ್ಪಳ ಜಿಲ್ಲೆಗೆ ಸೇರಿದವರಾಗಿರಬೇಕು. ೧೮ ರಿಂದ ೪೫ ವರ್ಷದೊಳಗಿನ ವಯೋಮಿತಿಯಲ್ಲಿರಬೇಕು. ಕನಿಷ್ಠ ಐದನೇ ತರಗತಿ ಪಾಸ್ ಆಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.೪೦,೦೦೦ ಮೀರಿರಬಾರದು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಜ.೧೧ ಅರ್ಜಿ ವಿತರಿಸಲು ಹಾಗೂ ಸ್ವೀಕರಿಸಲು  ಕೊನೆ ದಿನಾಂಕವಾಗಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಜ.೧೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಂದರ್ಶನ ನಡೆಯಲಿದೆ ಹಾಗೂ ಜ.೧೩ ರಿಂದ ತರಬೇತಿ ತರಗತಿಗಳು ಪ್ರಾರಂಭವಾಗಲಿವೆ. ಅರ್ಜಿ ನಮೂನೆ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ, ದೂರವಾಣಿ ಸಂಖ್ಯೆ:೦೮೫೩೯-೨೩೧೦೩೮ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. 

Advertisement

0 comments:

Post a Comment

 
Top