PLEASE LOGIN TO KANNADANET.COM FOR REGULAR NEWS-UPDATES

ಅಂಬಿಗರ ಚೌಡಯ್ಯ ಶಕ್ತಿಹೀನ ಸಮಾಜದಲ್ಲಿ ತನ್ನ ವಚನಗಳ ಮೂಲಕ ಜಾಗೃತಿ ಮೂಡಿಸಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. ಇವರ ವಚನಗಳ ಅಂಕಿತ "ಅಂಬಿಗರ ಚೌಡಯ್ಯ".

ಅಂಬಿಗರ ಚೌಡಯ್ಯನವರ ವಚನಗಳು.

ಬಡತನಕ್ಕೆ ಉಂಬುವ ಚಿಂತೆ, ಉಣಲಾರದೆ ಉಡುವ ಚಿಂತೆ (ಲಾದರೆ)?
ಉಡಲಾರದೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ (ಲಾದರೆ)?
ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ
ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ
ಇಂತೀ ಹಲವು ಚಿಂತೆಯಲ್ಲಿ ಇಪ್ಪವರನ್ನು ಕಂಡೆನು ಶಿವನ ಚಿಂತೆಯಲಿದ್ದವರೊಬ್ಬರನು ಕಾಣೆನೆಂದಾತ
ನಮ್ಮ ಅಂಬಿಗರ ಚೌಡಯ್ಯ ನಿಜ ಶರಣರು

Advertisement

0 comments:

Post a Comment

 
Top