PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜ. ೧೫ (ಕ ವಾ) ಜಿಲ್ಲೆಯಲ್ಲಿ ಜ. ೧೭ ರಿಂದ ೨೦ ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಮೊದಲ ಹಂತದ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರು ಮನವಿ ಮಾಡಿಕೊಂಡಿದ್ದಾರೆ.
     ಜಿಲ್ಲೆಯಲ್ಲಿ  ಜ. ೧೭ ರಿಂದ ೨೦ ರವರೆಗೆ ೦೪ ದಿನಗಳ ಕಾಲ ೦೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಜಿಲ್ಲೆಯ ೧,೯೫,೧೨೧  ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ.  ಆ ಪೈಕಿ ೧೬೪೮೮೫ ಮಕ್ಕಳು ಗ್ರಾಮಾಂತರ ಪ್ರದೇಶದವರಾಗಿದ್ದು, ೩೦೨೩೬ ಮಕ್ಕಳು ನಗರ ಪ್ರದೇಶದವರಾಗಿದ್ದಾರೆ.  ಮಕ್ಕಳಿಗೆ ಪೋಲಿಯೋ ಹನಿ ನೀಡುವ ಸಲುವಾಗಿ ಒಟ್ಟು ೨೯೩೧೫೭  ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ.  ಈ ಪೈಕಿ ಗ್ರಾಮೀಣ ಪ್ರದೇಶದ ೨೪೬೫೫೯ ಮನೆಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದ ೪೯೫೯೮ ಮನೆಗಳ ಭೇಟಿಗೆ ಗುರಿ ಹೊಂದಲಾಗಿದೆ.  ಜ. ೧೭ ರಂದು  ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಒಟ್ಟು ೧೮೪೬ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.  ಜ. ೧೮ ರಿಂದ ೨೦ ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಉಳಿಕೆ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುವುದು. ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಜಾತ್ರೆಗಳಲ್ಲಿ ಅಲ್ಲದೆ ಧಾರ್ಮಿಕ ಕ್ಷೇತ್ರಗಳಲ್ಲಿ ವಿಶೇಷ ಬೂತ್‌ಗಳನ್ನು ಸ್ಥಾಪಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ, ಮತ್ತೊಮ್ಮೆ ಜ. ೧೭ ರಿಂದ ೨೦ ರವರೆಗೆ ಜರುಗುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಸಂದರ್ಭದಲ್ಲಿ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು. ಪಾಲಕರು ತಮ್ಮ ೦೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು.  ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಗುಂಪುಗಳು, ಲಯನ್ಸ್, ರೋಟರಿ, ಇನ್ನರ್ ವ್ಹೀಲ್ ಹಾಗೂ ಇತರೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿ ಈ ರಾಷ್ಟ್ರೀಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರು ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top