ಕೊಪ್ಪಳ ಜ. ೧೮ (ಕ ವಾ) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕರು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹೆಚ್.ಎಸ್. ಪಾಟೀಲ್ ರವರ ಜೀವನ-ಸಾಧನೆಗಳ ಕುರಿತಾದ ವಿಚಾರಸಂಕಿರಣ ಹಾಗೂ ಸಂವಾದ ಗೋಷ್ಠಿಯನ್ನು ಜ. ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದೆ.
ಹಿರಿಯ ಲೇಖಕ ಅಲ್ಲಮಪ್ರಭು ಬೆಟ್ಟದೂರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಜಾನಪದ ಕಲಾ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಆಕಳವಾಡಿ, ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದ ಅಂಗವಾಗಿ ಹಿರಿಯ ಸಾಹಿತಿ ಡಾ. ಕೆ.ಬಿ. ಬ್ಯಾಳಿ, ಡಾ. ಮಹಾಂತೇಶ್ ಮಲ್ಲನಗೌಡರ, ಶಾಸನ ತಜ್ಞೆ ಹನುಮಾಕ್ಷಿ ಗೋಗಿ ವಿಚಾರ ಮಂಡಿಸುವರು. ಸಾಹಿತಿಗಳಾದ ರಮೇಶ್ ಗಬ್ಬೂರ, ಮುನಿಯಪ್ಪ ಹುಬ್ಬಳ್ಳಿ., ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ಡಾ. ವಿ.ಬಿ. ರಡ್ಡೇರ್, ಕನ್ನಡ ಉಪನ್ಯಾಸಕಿ ಡಾ. ಮಮ್ತಾಜ್ ಬೇಗಂ, ರಂಗಕರ್ಮಿ ಈಶ್ವರ ಹತ್ತಿ, ಗಾಯಿತ್ರಿ ಬಾವಿಕಟ್ಟಿ, ಪ್ರಮೋದ ತುರ್ವಿಹಾಳ್, ಕೆ. ಶರಣಪ್ಪ ನಿಡಶೇಸಿ, ಸಿರಾಜ್ ಬಿಸರಳ್ಳಿ ಸಂವಾದ ನಡೆಸುವರು. ಗಂಗಾವತಿಯ ಬಿ. ಬಸವಕೀರ್ತಿ ಸುಮಗಸಂಗೀತ ಪ್ರಸ್ತುತಪಡಿಸುವರು. ಇಲಾಖೆ ವತಿಯಿಂದ ಹೆಚ್.ಎಸ್. ಪಾಟೀಲರಿಗೆ ಗೌರವಾರ್ಪಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ತಿಳಿಸಿದ್ದಾರೆ.
ವಿವಿಧ ಹುದ್ದೆ : ಜ.೨೧ ರಂದು ನೇರ ಸಂದರ್ಶನ
ಕೊಪ್ಪಳ, ಜ.೧೮ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಜಿ.ವಿ.ಕೆ-೧೦೮ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಆಂಡ್ ರಿಸರ್ಚ್ ಇನ್ಸ್‌ಟಿಟ್ಯೂಟ್ ಬೆಂಗಳೂರು-೭೯ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಜ.೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಜಿ.ವಿ.ಕೆ ಆಂಬುಲೆನ್ಸ್‌ಗಳಲ್ಲಿ ಖಾಲಿ ಇರುವ ಸ್ಟಾಫ್ ನರ್ಸ್ ಮತ್ತು ಶ್ರೀಸಾಯಿ ಬಯೋ ಫರ್ಟಿಲೈಜರ್, ಹುಬ್ಬಳ್ಳಿಯಲ್ಲಿ ಖಾಲಿ ಇರುವ ಫೀಲ್ಡ್ ಆಫಿಸರ್ ಮತ್ತು ಗ್ರೂಪ್ ಲೀಡರ್ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಜ.೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸ್ಟಾಫ್ ನರ್ಸ್ ಹುದ್ದೆಗಳಿಗೆ ನಡೆಯುವ ಸಂದರ್ಶನದಲ್ಲಿ ಪಿ.ಯು.ಸಿ ಯೊಂದಿಗೆ ಎ.ಎನ್.ಎಮ್, ಜಿ.ಎನ್.ಎಮ್, ಬಿ.ಎಸ್.ಸಿ(ನರ್ಸಿಂಗ್) ಪದವಿ ಪಡೆದಿರುವ, ೧೮ ರಿಂದ ೨೮ ವರ್ಷದೊಳಗಿನ ವಯೋಮಿತಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಫೀಲ್ಡ್ ಆಫಿಸರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ೧೮ ರಿಂದ ೩೦ ವರ್ಷದೊಳಗಿನ ವಯೋಮಿತಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಹಾಗೂ ಗ್ರೂಪ್ ಲೀಡರ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸ್ಟಾಫ್ ನರ್ಸ್, ಫೀಲ್ಡ್ ಆಫಿಸರ್ ಹಾಗೂ ಗ್ರೂಪ್ ಲೀಡರ್ ಹುದ್ದೆಗಳಿಗೆ ಕ್ರಮವಾಗಿ ರೂ.೯೦೭೨, ರೂ.೮೦೦೦ ಹಾಗೂ ರೂ.೧೨,೦೦೦ ವೇತನ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಯಮ ಕಛೇರಿಯ ಉದ್ಯೋಗಾಧಿಕಾರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : ೦೮೫೩೯-೨೨೦೮೫೯ ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ : ಜ.೨೩ ರಂದು ಕಾಯಾಗಾರ
ಕೊಪ್ಪಳ, ಜ.೧೮ (ಕರ್ನಾಟಕ ವಾರ್ತೆ): ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾ ಹಂತದ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರವನ್ನು ಜ.೨೩ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
೨೦೧೬ರ ಮಾರ್ಚ್‌ನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ಅವರು ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಇದುವರೆಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಉತ್ತಮಪಡಿಸಲು ತಮ್ಮ ತಮ್ಮ ಶಾಲೆಗಳಲ್ಲಿ ಕೈಗೊಳ್ಳಲಾದ ಕ್ರಮಗಳ ಕುರಿತ ಮಾಹಿತಿಯೊಂದಿಗೆ ಕಾರ್ಯಾಗಾರದಲ್ಲಿ ಖುದ್ದಾಗಿ ಮತ್ತು ಕಡ್ಡಾಯವಾಗಿ ಹಾಜರಾಗಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ವಿಷಯ ಪರಿವೀಕ್ಷಕರು, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆಯಾ ಬ್ಲಾಕಿನ ಎಸ್.ಎಸ್.ಎಲ್.ಸಿ ನೋಡೆಲ್ ಅಧಿಕಾರಿಗಳು ಸಹ ಈ ಕಾರ್ಯಾಗಾರದಲ್ಲಿ ಹಾಜರಾಗುವಂತೆ ಕೊಪ್ಪಳದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ. ಶ್ಯಾಂಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲ್ಯ ವಿವಾಹ ನಿರ್ಮೂಲನೆ ಜಾಗೃತಿ ನಡೆ : ಜ. ೨೩ ರಂದು ಜಿಲ್ಲೆಯ ಎಲ್ಲ ಶಾಲೆಗಳಿಂದ ಜಾಥಾಕ್ಕೆ ಸೂಚನೆ
ಕೊಪ್ಪಳ ಜ. ೧೮ (ಕರ್ನಾಟಕ ವಾರ್ತೆ): ಬಾಲ್ಯ ವಿವಾಹ ನಿರ್ಮೂಲನೆಗಾಗಿ ಜ. ೨೩ ರಂದು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಜಾಗೃತಿ ನಡೆ ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್ ಅವರು ಸೂಚನೆ ನೀಡಿದ್ದಾರೆ.
ಬಾಲ್ಯ ವಿವಾಹವು ಅಭಿವೃದ್ಧಿಗೆ ಕೆಡುಕಾಗಿದ್ದು, ಇದರಿಂದಾಗಿ ಮಕ್ಕಳ ಎಲ್ಲ ಹಕ್ಕುಗಳು ಉಲ್ಲಂಘನೆಯಾಗುತ್ತವೆ. ಬಾಲ್ಯವನ್ನು ಸುಂದರವಾಗಿ ಅನುಭವಿಸಬೇಕಾದ ಮಕ್ಕಳ ಜೀವನದಲ್ಲಿ ಬಾಲ್ಯ ವಿವಾಹವು ದುಃಖ, ದುಮ್ಮಾನ, ಕಷ್ಟ, ನೋವು, ಹಿಂಸೆಯನ್ನು ನೀಡಿ, ಅವರ ಭವಿಷ್ಯ ಹಾಳು ಮಾಡುತ್ತದೆ. ಈ ಅನಿಷ್ಟ ಪದ್ಧತಿಯನ್ನು ಜಿಲ್ಲೆಯಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಿಲ್ಲಾಡಳಿತ ಪಣ ತೊಟ್ಟಿದ್ದು, ಎಲ್ಲರ ಸಹಕಾರ ಈ ಮಹತ್ಕಾರ್ಯಕ್ಕೆ ಅಗತ್ಯವಾಗಿದೆ. ಕೊಪ್ಪಳದ ಗವಿಮಠವು ಈ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕೈ ಜೋಡಿಸುತ್ತಿದೆ. ಅಲ್ಲದೆ ಈ ಬಾರಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬಾಲ್ಯ ವಿವಾಹ ನಿರ್ಮೂಲನೆಯನ್ನು ಜಾತ್ರೆಯ ಪ್ರಮುಖ ವಿಷಯವಾಗಿಟ್ಟುಕೊಂಡು, ಹಲವಾರು ಕಾರ್ಯಕ್ರಮ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, 'ಬಾಲ್ಯ ವಿವಾಹ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ' ವಿಷಯ ಕುರಿತು ಈಗಾಗಲೆ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು, ಜ. ೨೦ ರಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ನಡೆಸುತ್ತಿದೆ. ಜ. ೨೩ ರಂದು ಕೊಪ್ಪಳದಲ್ಲಿ ಗವಿಮಠದ ವತಿಯಿಂದ ಬಾಲ್ಯ ವಿವಾಹ ನಿರ್ಮೂಲನೆಗೆ ಜಾಗೃತಿ ನಡೆಯನ್ನು ಆಯೋಜಿಸಿದ್ದು, ಇದಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆಯೂ ಕೂಡ ಜಿಲ್ಲೆ ಎಲ್ಲ ಶಾಲೆಗಳ ವತಿಯಿಂದ ಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿಗೆ ಕಾರ್ಯಕ್ರಮ ರೂಪಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳು ಜ. ೨೩ ರಂದು ಸ್ಥಳೀಯ ಗ್ರಾಮ ಪಂಚಾಯತಿ, ಎಸ್‌ಡಿಎಂಸಿ, ಮಕ್ಕಳ ರಕ್ಷಣಾ ಸಮಿತಿ, ಅಂಗನವಾಡಿ, ಮಹಿಳಾ ಸ್ವ ಸಹಾಯ ಸಂಘ, ಮಕ್ಕಳ ಪಾಲಕರು/ಪೋಷಕರು ಹಾಗೂ ಸಾರ್ವಜನಿಕರೊಂದಿಗೆ ಅಂದು ಬೆಳಿಗ್ಗೆ ೯ ಗಂಟೆಯಿಂದ ೧೦ ಗಂಟೆಯವರೆಗೆ ಜಾಗೃತಿ ಜಾಥಾ ಆಯೋಜಿಸಬೇಕು. ಅಲ್ಲದೆ 'ಬಾಲ್ಯ ವಿವಾಹ ಆಗುವುದಿಲ್ಲ- ಮತ್ತು ಕಂಡುಬಂದರೆ ತಡೆಯುತ್ತೇನೆ' ಎಂಬುದಾಗಿ ಮಕ್ಕಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಬೇಕು. ಕೊಪ್ಪಳ ನಗರದಲ್ಲಿ ಅಂದು ಜಿಲ್ಲಾ ಮಟ್ಟದ ಮೆರಾಥಾನ್ ಆಯೋಜಿಸಲಾಗಿದ್ದು, ನಗರದ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಇದಕ್ಕಾಗಿ ನಿಯೋಜಿಸಿ, ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮರಳು ಸಾಗಾಣಿಕೆ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಿಕೊಳ್ಳಲು ಸೂಚನೆ
ಕೊಪ್ಪಳ, ಜ.೧೮ (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಎಲ್ಲಾ ಮರಳು ಸಾಗಾಣಿಕೆದಾರರು ತಮ್ಮ ಮರಳು ಸಾಗಾಣಿಕೆಯ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್ ಉಪಕರಣವನ್ನು ಅಳವಡಿಸಿಕೊಳ್ಳಬೇಕು ಎಂದು ಲೋಕೋಪಯೋಗಿ, ಬಂದರು ಮತ್ತು ಒಳನಾಡು, ಜಲಸಾರಿಗೆ ಇಲಾಖೆ ವಿಭಾಗ, ಕೊಪ್ಪಳದ ಕಾರ್ಯನಿರ್ವಾಹಕ ಇಂಜಿನಿಯರ್ ಲಷ್ಕರಿ ನಾಯ್ಕ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜ.೧೬ ರಂದು ಕೊಪ್ಪಳದಲ್ಲಿ ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ, ಜಿಲ್ಲೆಯ ಎಲ್ಲಾ ಮರಳು ಸಾಗಾಣಿಕೆದಾರರು ತಮ್ಮ ಮರಳು ಸಾಗಾಣಿಕೆಯ ವಾಹನಗಳಿಗೆ ಕಡ್ಡಾಯವಾಗಿ ತಮ್ಮ ಸ್ವಂತ ಖರ್ಚಿನಲ್ಲಿಯೇ ಜಿ.ಪಿ.ಎಸ್ ಉಪಕರಣವನ್ನು ಜ.೩೧ ರೊಳಗಾಗಿ ಅಳವಡಿಸಿಕೊಳ್ಳಬೇಕು. ಒಂದು ವೇಳೆ ನಿಗದಿಪಡಿಸಿದ ದಿನಾಂಕದೊಳಗಾಗಿ ಜಿ.ಪಿ.ಎಸ್ ಉಪಕರಣವನ್ನು ಅಳವಡಿಸದಿದ್ದಲ್ಲಿ ಅಂತಹ ವಾಹನಗಳಿಗೆ ಮರಳು ಸಾಗಾಣಿಕೆಯ ಪರ್ಮಿಟ್ ನೀಡಲಾಗುವುದಿಲ್ಲ. ೬ ಚಕ್ರವುಳ್ಳ ವಾಹನವಿದ್ದಲ್ಲಿ, ಅದರ ಸಾಮರ್ಥ್ಯ ಐದು ಘನ ಮೀಟರ್ ಮಾತ್ರ ಹೊಂದಿರಬೇಕು. ಇಲ್ಲದಿದ್ದಲ್ಲಿ ಅಂತಹ ವಾಹನಗಳಿಗೆ ಕೂಡಾ ಮರಳು ಪರ್ಮಿಟ್ ನೀಡಲಾಗುವುದಿಲ್ಲ. ಜಿ.ಪಿ.ಎಸ್ ಉಪಕರಣ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ಲೋಕೋಪಯೋಗಿ, ಬಂದರು ಮತ್ತು ಒಳನಾಡು, ಜಲಸಾರಿಗೆ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರಗಳನ್ನು ಅಥವಾ ಅಜಿತ್, ದೂರವಾಣಿ ಸಂಖ್ಯೆ: ೯೯೦೨೦೭೫೫೬೬ ಇವರನ್ನು ಸಂಪರ್ಕಿಸಬಹುದಾಗಿದೆ.
ಜಿಲ್ಲೆಯ ಎಲ್ಲಾ ಮರಳು ಗ್ರಾಹಕರು ಜಿಲ್ಲಾಧಿಕಾರಿಗಳ ಈ ಆದೇಶವನ್ನು ಪಾಲಿಸುವಂತೆ ಹಾಗೂ ಇಲಾಖೆಯೊಂದಿಗೆ ಸಹಕರಿಸುವಂತೆ ಲೋಕೋಪಯೋಗಿ, ಬಂದರು ಮತ್ತು ಒಳನಾಡು, ಜಲಸಾರಿಗೆ ವಿಭಾಗ, ಕೊಪ್ಪಳದ ಕಾರ್ಯನಿರ್ವಾಹಕ ಇಂಜಿನಿಯರ್ ಲಷ್ಕರಿ ನಾಯ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜ್ಮೀರ್, ಜೋಧಪುರ್ ರೈಲುಗಳಿಗೆ ಕೊಪ್ಪಳ ನಿಲ್ದಾಣಕ್ಕೆ ರಿಸರ್ವೇಶನ್ ಪ್ರಾರಂಭ
ಕೊಪ್ಪಳ ಜ. ೧೮ (ಕರ್ನಾಟಕ ವಾರ್ತೆ): ಕೊಪ್ಪಳ ಮಾರ್ಗದಲ್ಲಿ ಸಂಚರಿಸುವ ಜೋಧಪುರ-ಯಶವಂತಪುರ (೧೬೫೩೩/೧೬೫೩೪) ಹಾಗೂ ಅಜ್ಮೀರ್-ಯಶವಂತಪುರ (೧೬೫೩೧-೧೬೫೩೨) ರೈಲುಗಳಿಗೆ ಕೊಪ್ಪಳ ನಿಲ್ದಾಣಕ್ಕೆ ಕಾಯ್ದಿರಿಸುವಿಕೆ ಟಿಕೆಟ್ ನೀಡುವುದನ್ನು ಪ್ರಾರಂಭಿಸಲಾಗಿದೆ.
ಇದುವರೆಗೂ ಈ ರೈಲುಗಳಿಗೆ ಕೊಪ್ಪಳದಲ್ಲಿ ನಿಲುಗಡೆ ಇದ್ದರೂ, ರಿಸರ್ವೇಶನ್ ಟಿಕೆಟ್ ಅನ್ನು ಹೊಸಪೇಟೆಗೆ ನೀಡಲಾಗುತ್ತಿತ್ತು. ಈ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲ್ವೆ ಅಧಿಕಾರಿಗಳೊಂದಿಗೆ ಸಂಸದ ಕರಡಿ ಸಂಗಣ್ಣ ಅವರು ಚರ್ಚಿಸಿ, ಸಮಸ್ಯೆ ಪರಿಹರಿಸಲಾಗಿದ್ದು, ಉಭಯ ರೈಲುಗಳಿಗೆ ಕೊಪ್ಪಳ ನಿಲ್ದಾಣಕ್ಕೆ ರಿಸರ್ವೇಶನ್ ಟಿಕೆಟ್ ನೀಡುವುದನ್ನು ಜ. ೧೭ ರಿಂದ ಪ್ರಾರಂಭಿಸಲಾಗಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ತಿಳಿಸಿದ್ದಾರೆ ಎಂಬುದಾಗಿ ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ವಿಶೇಷ ಘಟಕ ಯೋಜನೆಯಡಿ ಫೆಲೋಶಿಪ್: ಅರ್ಜಿ ಆಹ್ವಾನ
ಕೊಪ್ಪಳ, ಜ.೧೮ (ಕರ್ನಾಟಕ ವಾರ್ತೆ): ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಪರಿಣಿತ ಕಲಾವಿದರು, ಹಾಗೂ ತಜ್ಞರಿಂದ ಸಂಶೋಧನೆಗಾಗಿ-ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಸಂಗೀತ, ನೃತ್ಯಾದಿ ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ, ಅಧ್ಯಯನ ಮಾಡಲು ಈ ಫೆಲೋಶಿಪ್ ನೀಡಲಾಗುತ್ತಿದೆ. ಆಸಕ್ತರು ಸಂಶೋಧನೆ/ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು ೫-೬ ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅಧ್ಯಯನದ ಅವಧಿ ಒಂದು ವರ್ಷವಾಗಿದ್ದು, ಒಟ್ಟು ಹತ್ತು ಫೆಲೋಶಿಪ್‌ಗಳನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದವರಿಗೆ ರೂ.೧.೦೦ ಲಕ್ಷ ಸಂಶೋಧನಾ ನೆರವನ್ನು ನೀಡಲಾಗುವುದು. ಅಲ್ಲದೆ, ಆಯ್ಕೆಯಲ್ಲಿ ಅಕಾಡೆಮಿ ತೀರ್ಮಾನವೇ ಅಂತಿಮವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ ಅಥವಾ ತಿತಿತಿ.ಞಚಿಟಿಟಿಚಿಜಚಿsiಡಿi.ಛಿo.iಟಿ ಅಂತರ್ಜಾಲದಲ್ಲಿಯೂ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಂಚೆ ಮೂಲಕ ಅರ್ಜಿ ಪಡೆಯಲಿಚ್ಛಿಸುವವರು ರೂ.೧೦ ಸ್ಟ್ಯಾಂಪ್ ಹಚ್ಚಿದ ಸ್ವವಿವರವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ ಇಲ್ಲಿಗೆ ಕಳುಹಿಸಿಕೊಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜ.೩೦ ಕೊನೆ ದಿನಾಂಕವಾಗಿದ್ದು, ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಟಿ.ಜಿ.ನರಸಿಂಹ ಮೂರ್ತಿ ಅವರು ತಿಳಿಸಿದ್ದಾರೆ.

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವ್ಯಾಪ್ತಿಗೆ ಒಳಪಡುವ ಸಂಗೀತ, ನೃತ್ಯಾದಿ ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ, ಅಧ್ಯಯನ ಮಾಡಲು ಈ ಫೆಲೋಶಿಪ್ ನೀಡಲಾಗುತ್ತಿದೆ. ಆಸಕ್ತರು ಸಂಶೋಧನೆ/ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು ೫-೬ ಪುಟಗಳ ಸಾರಲೇಖವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅಧ್ಯಯನದ ಅವಧಿ ಒಂದು ವರ್ಷವಾಗಿದ್ದು, ಒಟ್ಟು ಹತ್ತು ಫೆಲೋಶಿಪ್‌ಗಳನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆಯಾದವರಿಗೆ ರೂ.೧.೦೦ ಲಕ್ಷ ಸಂಶೋಧನಾ ನೆರವನ್ನು ನೀಡಲಾಗುವುದು. ಅಲ್ಲದೆ, ಆಯ್ಕೆಯಲ್ಲಿ ಅಕಾಡೆಮಿ ತೀರ್ಮಾನವೇ ಅಂತಿಮವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ ಅಥವಾ ತಿತಿತಿ.ಞಚಿಟಿಟಿಚಿಜಚಿsiಡಿi.ಛಿo.iಟಿ
ಅಂಚೆ ಮೂಲಕ ಅರ್ಜಿ ಪಡೆಯಲಿಚ್ಛಿಸುವವರು ರೂ.೧೦ ಸ್ಟ್ಯಾಂಪ್ ಹಚ್ಚಿದ ಸ್ವವಿವರವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨ ಇಲ್ಲಿಗೆ ಕಳುಹಿಸಿಕೊಡಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜ.೩೦ ಕೊನೆ ದಿನಾಂಕವಾಗಿದ್ದು, ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಟಿ.ಜಿ.ನರಸಿಂಹ ಮೂರ್ತಿ ಅವರು ತಿಳಿಸಿದ್ದಾರೆ.
0 comments:
Post a Comment