PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜ. ೦೮ (ಕ ವಾ) ಇದೇ ಜ. ೦೯ ಮತ್ತು ೧೦ ರಂದು ಎರಡನೆ ಶನಿವಾರ ಮತ್ತು ಭಾನುವಾರಗಳಂದು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿದ್ದು, ಇಲಾಖೆಯ ಮುಖ್ಯ ಕೆಲಸ-ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಎಲ್ಲ ಇಲಾಖೆಗಳಿಗೆ ಸಂಬಂಧಿಸಿದಂತೆ ನಿಗದಿತ ಕಾಲಾವಧಿಯಲ್ಲಿ ಫಲಾನುಭವಿಗಳ ಆಯ್ಕೆಯನ್ನು ಮಾಡಬೇಕಾಗಿರುತ್ತದೆ.  ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಸಹ ಸಿದ್ಧಪಡಿಸಿ, ಮೇಲಾಧಿಕಾರಿಗಳ ಅನುಮೋದನೆ ಪಡೆಯುವ ಕಾರ್ಯ ಸೇರಿದಂತೆ ಇನ್ನಿತರ ಮುಖ್ಯ ಕೆಲಸ ಕಾರ್ಯಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕಿರುತ್ತದೆ.  ಶೀಘ್ರವೇ ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಾಗುವ ಸಂಭವವಾಗಿರುತ್ತದೆ.  ಈ ಹಿನ್ನೆಲೆಯಲ್ಲಿ ಎಲ್ಲ ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದು, ಕಚೇರಿಯ ಅಗತ್ಯ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು.  ತಪ್ಪಿದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Advertisement

0 comments:

Post a Comment

 
Top