PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಫೆ. ೦೪ (ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಇತರೆ ದೂರುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಇದು ಫೆ. ೨೩ ರವರೆಗೂ ದಿನದ ಇಪ್ಪತ್ನಾಲ್ಕು ಗಂಟೆ ಕಾಲ ಕಾರ್ಯ ನಿರ್ವಹಿಸಲಿದೆ.
     ಚುನಾವಣೆ ನೀತಿ ಸಂಹಿತ ಉಲ್ಲಂಘನೆ ಬಗ್ಗೆ ಹಾಗೂ ಇತರೆ ದೂರುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ದಿನದ ಇಪ್ಪತ್ನಾಲ್ಕು ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸಲು ಈಗಾಗಲೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.  ೦೮೫೩೯-೨೨೦೮೫೪ ಇದು ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ ಆಗಿರುತ್ತದೆ.  ನಿಯಂತ್ರಣ ಕೊಠಡಿಗೆ ದೂರವಾಣಿಯಲ್ಲಿ ಅಥವಾ ಲಿಖಿತವಾಗಿ ಬರುವ ದೂರುಗಳನ್ನು ದಾಖಲಿಸಿ, ದೂರಿನ ಅಂಶಗಳ ಬಗ್ಗೆ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು.  ಇದರ ಜೊತೆಗೆ ಮತದಾನ ಕೇಂದ್ರಗಳು ಹಾಗೂ ಮತದಾರರ ಪಟ್ಟಿಗೆ ಸಂಬಂಧಿತ ಮಾಹಿತಿ ಕೋರಿ ಬರುವ ದೂರವಾಣಿ ಕರೆಗಳಿಗೂ ಸಹ ನಿಯಂತ್ರಣ ಕೊಠಡಿ ಸ್ಪಂದಿಸಿ, ಮಾಹಿತಿ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಿದೆ ಎಮದು ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್ ಜಿ.ಎಲ್. ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top