ಕೊಪ್ಪಳ ಮಾ. ೨೧ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಈ ಬಾರಿ ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಹೇಳಿದರುಡಾ. ಬಿ.ಆರ್. ಅಂಬೇಡ್ಕರ್ ಜಯಂತಿ : ಈ ಬಾರಿ ಅಂಬೇಡ್ಕರ್ ಅವರ ೧೨೫ ನೇ ಜನ್ಮ ದಿನಾಚರಣೆ
ಇರುವುದರಿಂದ, ಜಯಂತಿ ಅಂಗವಾಗಿ ಏ. ೧೪ ರಂದು ಬೆಳಿಗ್ಗೆ ೭-೩೦ ಗಂಟೆಗೆ ನಗರದ
ತಹಸಿಲ್ದಾರರ ಕಚೇರಿ ಆವರಣದಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಸಹಿತ
ಅದ್ಧೂರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ಹಲವು ಕಲಾ ತಂಡಗಳು
ಪಾಲ್ಗೊಂಡು, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ
ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ಡಾ. ಅಂಬೇಡ್ಕರ್ ಅವರ ಕುರಿತು
ವಿಶೇಷ ಉಪನ್ಯಾಸ ಆಯೋಜಿಸಲಾಗುವುದು.
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಉಭಯ ಮಹನೀಯರ ಜನ್ಮದಿನಾಚರಣೆಗಳನ್ನು ಕಟ್ಟುನಿಟ್ಟಾಗಿ ಆಚರಿಸುವಂತೆ ಸೂಚಿಸಲಾಗುವುದು. ಅದೇ ರೀತಿ ಎಲ್ಲ ಗ್ರಾ.ಪಂ. ಮಟ್ಟದ ಜನಪ್ರತಿನಿಧಿಗಳು ಜಿಲ್ಲಾ ಹಾಗೂ ತಾಲೂಕು ಸಮಾರಂಭಗಳಲ್ಲಿ ಭಾಗವಹಿಸಲು ವ್ಯವಸ್ಥೆಗೊಳಿಸಲಾಗುವುದು. ಮಹನೀಯರುಗಳ ಜನ್ಮದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ ಯಶಸ್ವಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಎಲ್ಲ ಅಧಿಕಾರಿ ವರ್ಗದವರು, ಜನಪ್ರತಿನಿಧಿಗಳು. ಸಮಾಜದ ಮುಖಂಡರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕರೆ ನೀಡಿದರು.
ಉಭಯ ಮಹನೀಯರ ಜಯಂತಿಯ ಅಂಗವಾಗಿ ಆಯಾ ದಿನಗಳಂದು ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಕೈಗೊಳ್ಳಬೇಕು. ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಮೆರವಣಿಗೆ ಸಾಗಿ ಬರುವ ದಾರಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕೈಗೊಳ್ಳಬೇಕು. ಮೆರವಣಿಗೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಕಾರ್ಯಕ್ರಮಗಳ ಯಶಸ್ವಿಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಆಯಾ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ನಗರದಲ್ಲಿ ಬಾಬು ಜಗಜೀವನರಾಮ್ ಭವನ, ಅಂಬೇಡ್ಕರ್ ಭವನ ಹಾಗೂ ವಾಲ್ಮೀಕಿ ಭವನ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಕರಡಿ ಸಂಗಣ್ಣ ಸೇರಿದಂತೆ ವಿವಿಧ ಮುಖಂಡರುಗಳು ಒತ್ತಾಯಿಸಿದರು.
ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂದೇಶ ಹಾಗೂ ಮಹತ್ವವನ್ನು ಬಿಂಬಿಸುವ ಕಿರು ಹೊತ್ತಿಗೆಗಳನ್ನು ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸುವಂತೆ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿ, ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಸಂದರ್ಭದಲ್ಲಿ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಸಂಸದ ಕರಡಿ ಸಂಗಣ್ಣ, ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್, ಸಮಾಜದ ಮುಖಂಡರುಗಳಾದ ಗವಿಸಿದ್ದಪ್ಪ ಕಂದಾರಿ, ಡಾ. ಜ್ಞಾನಸುಂದರ್, ಭರಮಪ್ಪ ಬೆಲ್ಲದ, ಸಿದ್ದೇಶ್ ಪೂಜಾರ್, ಯಲ್ಲಪ್ಪ ಬಳಗಾನೂರ, ಗಾಳೆಪ್ಪ ದೊಡ್ಡಮನಿ, ಹಾಲೇಶ್ ಕಂದಾರಿ, ಸಿದ್ದಪ್ಪ ಕಿಡದಾಳ, ಕಾಶಪ್ಪ ಅಳ್ಳಳ್ಳಿ, ಓಬಳೇಶ್, ಪ್ರಭುರಾಜ ಕಿಡದಾಳ, ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ, ಸೇರಿದಂತೆ ಹಲವಾರು ಗಣ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬಾಬು ಜಗಜೀವನರಾಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಬು ಜಗಜೀವನರಾಮ್ ಅವರ ೧೦೯ ನೇ ಜನ್ಮದಿನಾಚರಣೆಯನ್ನು ಏಪ್ರಿಲ್ ೦೫ ರಂದು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ೧೨೫ ನೇ ಜನ್ಮದಿನಾಚರಣೆಯನ್ನು ಏ. ೧೪ ರಂದು ಎಲ್ಲ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅದ್ಧೂರಿಯಾಗಿ ಆಚರಿಸಲಾಗುವುದು.
ಬಾಬು ಜಗಜೀವನರಾಂ ಜಯಂತಿ : ಏ. ೦೫ ರಂದು ಬೆಳಿಗ್ಗೆ ೭-೩೦ ಗಂಟೆಗೆ ನಗರದ ತಹಸಿಲ್ದಾರರ ಕಚೇರಿ ಆವರಣದಿಂದ ಬಾಬು ಜಗಜೀವನರಾಂ ಅವರ ಭಾವಚಿತ್ರ ಸಹಿತ ಮೆರವಣಿಗೆಯನ್ನು ಪ್ರಾರಂಭಿಸಲಾಗುವುದು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಜಾಂಜ್ ಮೇಳ ಮುಂತಾದ ಜಾನಪದ ತಂಡಗಳು ಪಾಲ್ಗೊಳ್ಳಲಿವೆ. ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗುವುದು. ಬಾಬು ಜಗಜೀವನರಾಂ ಅವರ ಕುರಿತು ಇದೇ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು.

0 comments:
Post a Comment