PLEASE LOGIN TO KANNADANET.COM FOR REGULAR NEWS-UPDATES

ಸಿಂಧನೂರು ಮಾ,೭- ಕಳೆದ ೪೦ ವರ್ಷಗಳಿಂದ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಜನಮನ್ನಣೆಗಳಿಸಿರುವ ಈ ನಮ್ಮ ಕನ್ನಡನಾಡು ಪತ್ರಿಕೆಯ ಹಿರಿಯ ಸಂಪಾದಕ ವಿ.ಜಗನ್ಮೋಹನರೆಡ್ಡಿ ಅವರಿಗೆ ಜೀವಮಾನ ಪ್ರಶಸ್ತಿ ಲಭಿಸಿದೆ.
ತಮಿಳುನಾಡಿನ ಚೆನೈ ರಾಜಧಾನಿಯ ರಾಜಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಪ್ರಜಾಡೈರಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಕಳೆದ ೩೫ ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿರುವ ವಿ.ಜಗನ್ಮೋಹನರೆಡ್ಡಿ ಅವರಿಗೆ ತಮಿಳುನಾಡು ರಾಜ್ಯಪಾಲ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೆ.ರೋಷಯ್ಯನವರು ಈ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದರು.

Advertisement

 
Top