PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಮಾ.೧೪ (ಕ ವಾ) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಸಂಘಗಗಳ ಒಕ್ಕೂಟ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಕಲಬುರಗಿ ವಿಭಾಗ ಮಟ್ಟದ ಯುವಜನ ಮೇಳದ ಉದ್ಘಾಟನೆ ಕಾರ್ಯಕ್ರಮ ಮಾ.೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಗಂಗಾವತಿ ತಾಲೂಕಿನ ಕನಕಗಿರಿಯ ಎ.ಪಿ.ಎಂ.ಸಿ ಸಮುದಾಯ ಭವನದಲ್ಲಿ ಜರುಗಲಿದೆ.
    ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಉದ್ಘಾಟನೆ ನೆರವೇರಿಸುವರು.  ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ಕೆ.ರಾಘವೇಂದ್ರ ಹಿಟ್ನಾಳ್, ದೊಡ್ಡನಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್,  ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್, ಅಪರ ಜಿಲ್ಲಾಧಿಕಾರಿ ಡಾ.ಪ್ರವೀಣಕುಮಾರ ಜಿ.ಎಲ್, ಉಪವಿಭಾಗಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ, ಭಾಗವಹಿಸುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಶಾರದಾ ಎಂ.ನಿಂಬರಗಿ ತಿಳಿಸಿದ್ದಾರೆ.
ಮಾ. ೧೫ ರಂದು ಗಂಗಾವತಿಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚಣೆ.
ಕೊಪ್ಪಳ, ಮಾ.೧೪ (ಕ ವಾ) ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಮಾ.೧೫ ರಂದು ಬೆಳಿಗ್ಗೆ ೧೦.೩೦ ಕ್ಕೆ ಗಂಗಾವತಿಯ ಹೆಚ್. ಆರ್. ಶ್ರೀರಾಮುಲು ಮಹಾವಿದ್ಯಾಲಯದ ಸರಸ್ವತಿ ಗಿರಿಯಲ್ಲಿ ಜರುಗಲಿದೆ.
     'ಆಂಟಿಬಯೋಟಿಕ್ಸ್‌ಗಳೇ ಆಹಾರವಾಗಲಿ' ಎಂಬ ಘೋಷವಾಕ್ಯದೊಂದಿಗೆ ಆರಂಭವಾಗಲಿರುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷೆ ಏಕತಾ ಹೆಚ್.ಡಿ. ಅಧ್ಯಕ್ಷತೆ ವಹಿಸುವರು.  ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಕಾರ್ಯಕ್ರಮ ಉದ್ಘಾಟಿಸುವರು, ಮುಖ್ಯ ಅತಿಥಿಯಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್, ಅತಿಥಿಯಾಗಿ ತಹಶಿಲ್ದಾರ ಎಲ್.ಡಿ. ಚಂದ್ರಕಾಂತ ಭಾಗವಹಿಸುವರು.
      ಪ್ರೋ.ಪುಟ್ಟಸ್ವಾಮಿ, ಎಫ್.ಹೆಚ್.ಚಿತ್ರಗಾರ, ಲಲಿತಾ ಬಾವಿಕಟ್ಟಿ ವಿಶೇಷ ಆಹ್ವಾನಿರಾಗಿ ಪಾಲ್ಗೊಳ್ಳುವರು, ನ್ಯಾಯವಾದಿ ಎಸ್.ಬಿ.ರೆಡ್ಡಿ ಗ್ರಾಹಕರ ಹಕ್ಕುಗಳ ಕುರಿತು ಉಪನ್ಯಾಸ ನೀಡುವರು. ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವೈ.ಹೆಚ್.ಲಂಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಮಾ. ೧೬ ರಂದು ಸರ್ಕಾರಿ ಐಟಿಐ ಕಟ್ಟಡದ ಅಡಿಗಲ್ಲು ಸಮಾರಂಭ.
ಕೊಪ್ಪಳ ಮಾ. ೧೪ (ಕ ವಾ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವತಿಯಿಂದ ಜಿಲ್ಲಾಡಳಿತ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಸಹಯೋಗದೊಂದಿಗೆ ಪಿಪಿಪಿ ಕಟ್ಟಡದ ಅಡಿಗಲ್ಲು ಸಮಾರಂಭ ಮಾ. ೧೬ ರಂದು ಬೆಳಿಗ್ಗೆ ೧೦ ಗಂಟೆಗೆ ತಾಲೂಕಿನ ಟಣಕನಕಲ್ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದೆ.
     ರಾಜ್ಯ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್, ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು.  ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಉಪಸ್ಥಿತರಿರುವರು.  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರುಗಳಾದ ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ್, ಬಸವರಾಜ ಪಾಟೀಲ್ ಇಟಗಿ, ಓಜನಹಳ್ಳಿ ಗ್ರಾ.ಪಂ. ಅಧ್ಯಕ್ಷ ಯಮನೂರಪ್ಪ ನಾಯಕ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಐಎಂಸಿ ಅಧ್ಯಕ್ಷ ಬಿ. ರವಿಚಂದರ್ ಅತಿಥಿಗಳಾಗಿ ಭಾಗವಹಿಸುವರು.

Advertisement

0 comments:

Post a Comment

 
Top