PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಮಾ.೧೦ (ಕ ವಾ) ಪ್ರವಾಸೋದ್ಯಮ ಇಲಾಖೆಯಿಂದ ೨೦೧೩-೧೪ ನೇ ಸಾಲಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ/ಅಲ್ಪ ಸಂಖ್ಯಾತ ವರ್ಗದ ಒಟ್ಟು ೧೧ ನಿರುದ್ಯೋಗಿ ಯುವಕರಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ.ಎಸ್.ತಂಗಡಗಿ ಮಾ. ೦೮ ರಂದು ಜಿಲ್ಲಾಡಳಿತ ಭವನ ಆವರಣದಲ್ಲಿ ವಿತರಣೆ ಮಾಡಿದರು.
      ಈ ಸಂದರ್ಭದಲ್ಲಿ ಪ.ಜಾತಿಯ ೦೪, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವರ್ಗದ ೦೭. ಫಲಾನುಭವಿಗಳು ಪ್ರವಾಸಿ ಟ್ಯಾಕ್ಸಿಯನ್ನು ಸಚಿವರಿಂದ ಪಡೆದರು.  ಪ್ರವಾಸೋದ್ಯಮ ಇಲಾಖೆಯು ೨೦೧೩-೧೪ ನೇ ಸಾಲಿನಲ್ಲಿ ಪ.ಜಾತಿ- ೨೯, ಪ.ಪಂಗಡ-೧೫, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ವರ್ಗದ ೪೭ ಜನರಿಗೆ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳನ್ನಾಗಿ ಆಯ್ಕೆ ಮಾಡಿದ್ದು, ಇದೀಗ ೧೧ ಜನರಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಜಿಲ್ಲಾಧಿಕಾರಿ ಎಂ. ಕನಗವಲ್ಲಿ, ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ತ್ಯಾಗರಾಜನ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
     ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಇಲಾಖೆಯು ಪ್ರತಿ ಫಲಾನುಭವಿಗೆ ತಲಾ ೦೨ ಲಕ್ಷ ರೂ. ಗಳ ಸಹಾಯಧನ ನೀಡಲಿದೆ.  ಅದೇ ರೀತಿ ೨೦೧೪-೧೫ ನೇ ಸಾಲಿಗಾಗಿ ಪ.ಜಾತಿ- ೧೩, ಪ.ಪಂಗಡ-೦೩ ಜನರಿಗೆ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರವಾಸೋದ್ಯ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Advertisement

0 comments:

Post a Comment

 
Top