ಕೊಪ್ಪಳ ಮಾ. ೧೯ ಹೋಳಿ ಹಬ್ಬದ ಸಂದರ್ಭದಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಮಾ. ೨೩ ಮತ್ತು ೨೪ ರಂದು ಗಂಗಾವತಿ ನಗರದಲ್ಲಿ ಬನಾಯೇಂಗೆ ಮಂದಿರ್ ಹಾಡನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.ಮಾ. ೨೩ ರಂದು ಕಾಮದಹನ ಮತ್ತು ಮಾ. ೨೪ ರಂದು ಹೋಳಿ ಹಬ್ಬದ ಅಂಗವಾಗಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಗಂಗಾವತಿ ನಗರ ಠಾಣಾ ವ್ಯಾಪ್ತಿಯಲ್ಲಿ ಮಾ. ೨೩ ರಂದು ಬೆಳಿಗ್ಗೆ ೬ ಗಂಟೆಯಿಂದ ಮಾ. ೨೪ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಬನಾಯೇಂಗೆ ಮಂದಿರ್ ಎಂಬ ಹಾಡನ್ನು ಯಾರೂ ಸಾರ್ವಜನಿಕವಾಗಿ ಹಾಡದಂತೆ ಹಾಗೂ ಆಡಿಯೋ ಅಥವಾ ವಿಡಿಯೋ ರೂಪದಲ್ಲಿ ಬಿತ್ತರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಆದೇಶದಲ್ಲಿ ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment