PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ   ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರದಂದು ಜರುಗಿದ ಎಸ್‌ಎಸ್‌ಎಲ್‌ಸಿ ವಿಜ್ಞಾನ   ವಿಷಯದ ಪರೀಕ್ಷೆಗೆ ೧೮೧೬೦ ವಿದ್ಯಾರ್ಥಿಗಳು ಹಾಜರಾಗಿದ್ದು, ೮೧೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.  ಪರೀಕ್ಷಾ ಅಕ್ರಮ ಚಟುವಟಿಕೆಗಾಗಿ ಕೊಪ್ಪಳ ತಾಲೂಕಿನಲ್ಲಿ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.
  ಪರೀಕ್ಷಾ ಅಕ್ರಮ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಹಿರೇಸಿಂದೋಗಿ ಪರೀಕ್ಷಾ ಕೇಂದ್ರದಲ್ಲಿ ೦೨ ಹಾಗೂ ಹ್ಯಾಟಿ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿ ಸೇರಿದಂತೆ ಒಟ್ಟು ೦೩ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.  ಜಿಲ್ಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ  ವಿಜ್ಞಾನ ವಿಷಯದ ಪರೀಕ್ಷೆಗೆ ದಾಖಲಾತಿಯಾಗಿದ್ದ ೧೮೯೭೯ ವಿದ್ಯಾರ್ಥಿಗಳ ಪೈಕಿ ೧೮೧೬೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೮೧೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ,  ಗಂಗಾವತಿ ತಾಲೂಕಿನಲ್ಲಿ ೨೬೩, ಕೊಪ್ಪಳ- ೩೩೩, ಕುಷ್ಟಗಿ- ೯೦ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ೧೩೩ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ .

Advertisement

 
Top