PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಏ. ೦೨ಮಕ್ಕಳು ಹಾಗೂ ಗರ್ಭಿಣಿಯರನ್ನು ಮಾರಕ ರೋಗಗಳಿಂದ ರಕ್ಷಿಸಲು, ಏ. ೪ ರಿಂದ ೧೩ ರವರೆಗೆ ಏಳು ದಿನಗಳ ಕಾಲ 'ಇಂದ್ರಧನುಷ್' ವಿಶೇಷ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ೦೨ ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ತಪ್ಪದೆ ವಿಶೇಷ ಲಸಿಕೆ ಹಾಕಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಮನವಿ ಮಾಡಿದರು.
     ಆರೋಗ್ಯ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುವ ಇಂದ್ರಧನುಷ್ ಅಭಿಯಾನ ಕಾರ್ಯಕ್ರಮದ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ದೇಶದ ಭವಿಷ್ಯದ ಪ್ರಜೆಗಳು ಆರೋಗ್ಯವಂತರಾಗಿರಲು ಹಾಗೂ ಸದೃಢ ಸಮಾಜ ನಿರ್ಮಾಣವಾಗಲು, ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಮಹತ್ವವನ್ನು ಸರ್ಕಾರ ನೀಡುತ್ತಿದೆ.  ಈ ನಿಟ್ಟಿನಲ್ಲಿ ಹುಟ್ಟುವ ಮಕ್ಕಳಿಗೆ ಮಾರಕ ರೋಗಗಳಿಂದ ರಕ್ಷಿಸಲು ಲಸಿಕೆಯನ್ನು ತಪ್ಪದೆ ಹಾಕಿಸುವುದು ಅಗತ್ಯವಾಗಿದೆ.  ಆದರೆ ಹಲವು ಕಾರಣಗಳಿಂದ ಮಕ್ಕಳು ಲಸಿಕೆಯಿಂದ ವಂಚಿತರಾಗುತ್ತಿದ್ದಾರೆ.  ಮಕ್ಕಳನ್ನು ಮಾರಕ ರೋಗಗಳಿಂದ ರಕ್ಷಿಸುವ ಸಲುವಾಗಿಯೇ ಸರ್ಕಾರ ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಕೊಪ್ಪಳ ಜಿಲ್ಲೆಯೂ ಸೇರಿದಂತೆ ರಾಜ್ಯದ ೦೫ ಜಿಲ್ಲೆಗಳಲ್ಲಿ ಏ. ೦೪ ರಿಂದ ೧೩ ರವರೆಗೆ ಆಯೋಜಿಸಿದ್ದು, ಜಿಲ್ಲೆಯ ೦೨ ವರ್ಷದೊಳಗಿನ ಎಲ್ಲ ಮಕ್ಕಳು ಹಾಗೂ ಗರ್ಭಿಣಿಯರಿಗೆ ತಪ್ಪದೆ ಲಸಿಕೆ ಹಾಕಬೇಕು.  ಯಾವುದೇ ಮಗು ಅಥವಾ ಗರ್ಭಿಣಿಯರು ಲಸಿಕೆಯಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.  ಈ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ, ಆರೋಗ್ಯ ಸೇರಿದಂತೆ ಸಂಬಂ
     ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ರಮೇಶ್ ಮೂಲಿಮನಿ ಅವರು, ಇಂದ್ರಧನುಷ್ ಲಸಿಕಾ ಕಾರ್ಯಕ್ರಮದ ಕುರಿತು ವಿವರಣೆ ನೀಡಿ, ಮಕ್ಕಳ ಪ್ರಾಣಕ್ಕೆ ಸಂಚಕಾರ ತರುವ ಗಂಟಲು ಮಾರಿ, ಪೋಲಿಯೋ, ಮೆದುಳು ಜ್ವರ, ನಾಯಿಕೆಮ್ಮು, ದಡಾರ ಮತ್ತು ಟೆಟ್ಯಾನಸ್ ಮತ್ತು ಹೆಪಟೈಟಸ್ ಸೇರಿದಂತೆ ಒಂಭತ್ತು ರೋಗಗಳನ್ನು ತಡೆಗಟ್ಟಲು ಇಂದ್ರಧನುಷ್ ವಿಶೇಷ ಲಸಿಕಾ ಕಾರ್ಯಕ್ರಮವನ್ನು ಏ. ೦೪ ರಿಂದ ಒಂದು ವಾರ ಕಾಲ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಎರಡು ವರ್ಷದೊಳಗಿನ ೪೯೮೬ ಮಕ್ಕಳು ಮತ್ತು ೬೯೦ ಗರ್ಭಿಣಿಯರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.  ಕೊಪ್ಪಳ ತಾಲೂಕು- ಮಕ್ಕಳು-೧೧೦೫, ಗರ್ಭಿಣಿಯರು-೧೪೪.  ಗಂಗಾವತಿ: ಮಕ್ಕಳು-೨೦೧೫, ಗರ್ಭಿಣಿಯರು-೩೬೪.  ಕುಷ್ಟಗಿ: ಮಕ್ಕಳು-೪೪೬, ಗರ್ಭಿಣಿಯರು-೪೭.  ಯಲಬುರ್ಗಾ: ಮಕ್ಕಳು- ೧೪೨೦, ಗರ್ಭಿಣಿಯರು-೧೩೫ ಜನರಿಗೆ ಲಸಿಕೆ ಹಾಕುವ ಗುರಿ ಇದೆ.  ಇದಕ್ಕಾಗಿ ಜಿಲ್ಲೆಯಲ್ಲಿ ೩೩೫ ಲಸಿಕಾ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಸ್ಥಾಪಿಸಲಾಗುವುದಲ್ಲದೆ, ೭೨ ಸಂಚಾರಿ ಲಸಿಕಾ ತಂಡವನ್ನು ಸಹ ನಿಯೋಜಿಸಲಾಗುವುದು ಎಂದರು.
       ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರು  ಮಾತನಾಡಿ ಇಂದ್ರಧನುಷ್ ಅಭಿಯಾನ ಯಶಸ್ವಿಗೊಳಿಸಲು ಈಗಾಗಲೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳಿಗೆ, ಆಶಾ, ಎಎನ್‌ಎಂ ಕಾರ್ಯಕರ್ತೆಯರಿಗೆ ಈಗಾಗಲೆ ತಾಂತ್ರಿಕ ತರಬೇತಿ ನೀಡಲಾಗಿದೆ ಎಂದರು.  ಸರ್ವೆಲೆನ್ಸ್ ಮೆಡಿಕಲ್ ಆಫೀಸರ್ ಡಾ. ಶ್ರೀಧರ್, ಸೇರಿದಂತೆ ಡಾ. ಎಸ್.ಕೆ. ದೇಸಾಯಿ, ಡಾ. ಆಂಜನೇಯ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. 

ಧಪಟ್ಟ ಎಲ್ಲ ಇಲಾಖೆಗಳು ಅಗತ್ಯ ಸಹಕಾರವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು, ೦೨ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಮನವಿ ಮಾಡಿಕೊಂಡರು.

Advertisement

0 comments:

Post a Comment

 
Top